ಕೊಪ್ಪಳ | ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಬೆಂಕಿ: ಕ್ರೀಡಾ ಸಾಮಗ್ರಿಗಳು ಭಸ್ಮ

Date:

ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.

- Advertisement -

ಬೆಳಿಗ್ಗೆ 6.30ರ ಸುಮಾರಿಗೆ ಕೊಠಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ, ಅಷ್ಟರಲ್ಲಾಗಲೇ ಕ್ರೀಡಾ ಇಲಾಖೆಗೆ ಸೇರಿದ ಸುಮಾರು 30 ಬಂಡಲ್ ಕಬಡ್ಡಿ ಮ್ಯಾಟ್‌ಗಳು ಹಾಗೂ 2,500 ಲೀಟರ್ ಸಾಮರ್ಥ್ಯದ ನೀರಿನ ಸಿಂಟೆಕ್ಸ್ ಟ್ಯಾಂಕ್ ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಹಾನಿಗೊಳಗಾದ ವಸ್ತುಗಳ ಒಟ್ಟು ಮೌಲ್ಯ ಸುಮಾರು ಎರಡು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಶಾಲಾ ಆವರಣದಲ್ಲಿ ಈ ಹಿಂದೆಯೂ ಸಿಸಿಟಿವಿ ಕ್ಯಾಮೆರಾಗಳು, ನೀರಿನ ಪೈಪ್‌ಗಳು ಹಾಗೂ ಶೌಚಾಲಯದ ಬಾಗಿಲುಗಳನ್ನು ಹಾನಿಗೊಳಿಸಿದ ಘಟನೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾಲಹಳ್ಳಿ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರಗಳಿಗೆ ಎಸ್‌ಸಿ ಮೀಸಲಾತಿಗೆ ಆಗ್ರಹ

ಪ್ರಸ್ತುತ ಅಗ್ನಿ ಅವಘಡಕ್ಕೆ ಕಾರಣರಾದವರನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ ಎಂ. ಸಕ್ರಿ ಅವರು ಕನಕಗಿರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಕಬ್ಬು ಬೆಳೆಗಾರರು; ಬೈಪಾಸ್ ರಸ್ತೆ ತಡೆದು ಪ್ರತಿಭಟನೆ

ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ...

ಅ.15ರಂದು ದ.ಕ., ಉಡುಪಿ ಜಿಲ್ಲೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅ.15ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ...

ರಾಯಚೂರು | ಕಸ ಹಾಕಿದರೆ ₹50 ಸಾವಿರ ದಂಡ: ಮಹಾನಗರ ಪಾಲಿಕೆ ಎಚ್ಚರಿಕೆ

ನಗರ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ಕಸದ ರಾಶಿ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು...