ಲಿಂಗಸಗೂರು | ಜಾಲಿಬೆಂಚಿ ಬಳಿ ಮಹಿಳೆ ಶವ ಪತ್ತೆ: ಅತ್ಯಾಚಾರ, ಕೊಲೆ ಶಂಕೆ

Date:

ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಲಿಂಗಸುಗೂರು ತಾಲ್ಲೂಕಿನ ಜಾಲಿಬೆಂಚಿ ಗ್ರಾಮದ ಸಮೀಪ ನಡೆದಿದೆ.

- Advertisement -

ಮೃತರನ್ನು ಕರಡಕಲ್ ಗ್ರಾಮದ ರಾಣೆಮ್ಮ (35), ಪತಿ ತಿಪ್ಪಣ್ಣ ಬಜಲರ ಎಂದು ಗುರುತಿಸಲಾಗಿದೆ. ರಾಣೆಮ್ಮ ಅವರು ಬುಧವಾರ ಸಂಜೆ ಕಟ್ಟಿಗೆ ತರಲು ಜಾಲಿಬೆಂಚಿ ಗ್ರಾಮದ ಕಡೆಗೆ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಮಾರ್ಗಮಧ್ಯೆ ಹೊಲವೊಂದರಲ್ಲಿ ಅಪರಿಚಿತರು ಆಕೆಯ ಮೇಲೆ ಅತ್ಯಾಚಾರ ನಡೆಸಿ, ಬಳಿಕ ಕೊಲೆ ಮಾಡಿ ಪರಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಹಾಗೂ ಅತ್ಯಾಚಾರ ನಡೆದಿರುವ ಬಗ್ಗೆ ಸ್ಪಷ್ಟತೆ ದೊರೆಯಲಿದೆ. ಈ ಕುರಿತು ಪೊಲೀಸರು ಯಾವುದೇ ಅಂತಿಮ ಅಧಿಕೃತ ಮಾಹಿತಿ ನೀಡಿಲ್ಲ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನಾ ಸ್ಥಳದಿಂದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದ್ದು, ರಾಣೆಮ್ಮ ಅವರೊಂದಿಗೆ ಕೊನೆಯದಾಗಿ ಸಂಪರ್ಕದಲ್ಲಿದ್ದವರು ಯಾರು, ಅವರು ತೆರಳಿದ್ದ ಮಾರ್ಗ ಹಾಗೂ ಘಟನಾ ಸಂದರ್ಭದಲ್ಲಿ ಸ್ಥಳದಲ್ಲಿದ್ದವರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾವಿಯಲ್ಲಿ ಯುವತಿಯ ಮೃತದೇಹ ಪತ್ತೆ

ಮಹಿಳೆಯ ಅನುಮಾನಾಸ್ಪದ ಸಾವು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...