ರಾಯಚೂರು | ಮುದಗಲ್‌ನ ಹಮಾಲಿ ಕಾರ್ಮಿಕರ ಸಮಸ್ಯೆ ಪರಿಹರಿಸಲು ಕ್ರಮ; ಎಸಿ ಭರವಸೆ

Date:

ಮುದಗಲ್‌ನ ಹಮಾಲಿ ಕಾರ್ಮಿಕರ ಕೂಲಿ ದರ ಸಮಸ್ಯೆಯನ್ನು ಪರಿಹರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಲಿಂಗಸುಗೂರು ಸಹಾಯಕ ಆಯುಕ್ತ (ಎಸಿ) ಭರವಸೆ ನೀಡಿದ್ದಾರೆ.

- Advertisement -

ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಸಿಐಟಿಯು ಮುಖಂಡರೊಂದಿಗೆ ಅವರು ಸಭೆ ನಡೆಸಿದ್ದಾರೆ. ಸಭೆಗೆ ಹಾಜರಾಗುವಂತೆ ಕೂಲಿ ದರ ಹೆಚ್ಚಿಸಲು ನಿರಾಕರಿಸಿದ್ದ ಮುದಗಲ್‌ನ ಟ್ರೇಡರ್ಸ್ ಮಾಲೀಕರಿಗೆ ಹಾಗೂ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಅವರಿಗೆ ನೋಟೀಸ್ ನೀಡಿದ್ದರೂ, ಮಾಲೀಕರು ಸಭೆಗೆ ಹಾಜರಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಹಿಂದೆ, ಸ್ಥಳೀಯ ಪೊಲೀಸ್ ಠಾಣೆಪಿ ಎಸ್ಐ, ಕಾರ್ಮಿಕ ನಿರೀಕ್ಷಕರು, ತಹಶೀಲ್ದಾರರು ಕರೆದಿದ್ದ ಸಂಧಾನ ಸಭೆಗೂ ಅವರಾರು ಬಂದಿರಲಿಲ್ಲ. ಎಲ್ಲ ಟ್ರೇಡರ್ಸ್‌ ಮಾಲೀಕರನ್ನು ಮದಿನಾ ಟ್ರೇಡರ್ಸ್‌ ಮಾಲೀಕ ಟಿಪ್ಪು ಸಾಬ್‌ ನಿಯಂತ್ರಿಸುತ್ತಿದ್ದಾರೆ. ಆತನ ಅಣತಿಯಂತೆ ಉಳಿದವರು ವರ್ತಿಸುತ್ತಿದ್ದಾರೆ. ಅವರೆಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಟ್ರೇಡರ್ಸ್‌ಗಳ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಸಿಐಟಿಯು ಮುಖಂಡರು ಆಗ್ರಹಿಸಿದರು.

“ಅಂಗಡಿ ಮಾಲೀಕರೊಂದಿಗೆ ಶಾಮೀಲಾಗಿ, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಶಂಶಾಲಮ್, “ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಹಮಾಲಿ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ತಿಪ್ಪಯ್ಯ, ಜಿಲ್ಲಾಧ್ಯಕ್ಷ ಯಂಕಪ್ಪ ಕೆಂಗಲ್, ಕಾರ್ಯದರ್ಶಿ ಮರಿಸ್ವಾಮಿ, ಕೆಪಿಆರ್ ಎಸ್ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ್, ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಸಿಐಟಿಯು ಮುಖಂಡರಾದ ಹನೀಫ್, ಫಕ್ರುದ್ದೀನ್, ಮಲ್ಲೇಶ್ ಕೋಠಾ, ನಿಂಗಪ್ಪ, ಬಾಬಾಜಾನಿ, ವಿಶ್ವ ಅಂಗಡಿ, ಅಂಜಪ್ಪ, ನಾಗರಾಜ್, ಕಾಶಿಪತಿ, ಬಾಲಾಜಿ ಹಟ್ಟಿ, ತೋಟೇಶ್ವರ್, ಆಂಜನೇಯ, ಸದ್ದಾಮ್ ಹುಸೇನ್, ಮಹಿಬು, ಮಹಮ್ಮದ್ ಅಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...