ಲಿಂಗಸೂಗೂರು | ಭೂಮಾನಂದ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ದಲಿತ ಸಂಘಟನೆಗಳಿಂದ ಪ್ರತಿಭಟನೆ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಿಎಸ್‌ಪಿ ಜಿಲ್ಲಾಧ್ಯಕ್ಷ ಭೂಮಾನಂದ ಅವರ ಹತ್ಯೆಯನ್ನು ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಕೂಡಲೇ ಹತ್ಯೆ ಮಾಡಿದ ಆರೋಪಿಗಳಿಗೆ ಗೆಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

- Advertisement -

​ಭೂಮಾನಂದರವರಿಗೆ ಜೀವ ಬೆದರಿಕೆ ಕುರಿತು ಗಬ್ಬೂರು ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದರೂ ಸಹ, ಅವರಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸದಿರುವುದು ಆಡಳಿತದ ಗಂಭೀರ ವೈಫಲ್ಯವಾಗಿದೆ. ಈ ನಿರ್ಲಕ್ಷ್ಯದಿಂದಲೇ ಅಮೂಲ್ಯ ಜೀವ ಬಲಿಯಾಗಿರುವುದು ಅತ್ಯಂತ ವಿಷಾದನೀಯ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

​ಇತ್ತೀಚಿನ ದಿನಗಳಲ್ಲಿ ರಾಯಚೂರು, ಯಾದಗಿರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿಯ (ಮಾದಿಗ ಮತ್ತು ಹೊಲೆಯ) ಸಮುದಾಯದವರ ಮೇಲೆ ನಿರಂತರವಾಗಿ ಜಾತಿ ಆಧಾರಿತ ದೌರ್ಜನ್ಯಗಳು, ಹಲ್ಲೆಗಳು, ಸಾಮಾಜಿಕ ಬಹಿಷ್ಕಾರ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸಂವಿಧಾನದ ಸಮಾನತೆ, ನ್ಯಾಯ ಹಾಗೂ ಮಾನವ ಗೌರವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಭೂಮಾನಂದ ರವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಹಾಗೂ ಸಂಚು ರೂಪಿಸಿದ ಸೂತ್ರಧಾರರನ್ನು ತಕ್ಷಣ ಬಂಧಿಸಿ, ಪ್ರಕರಣದ ತನಿಖೆಯನ್ನು ವೇಗಗೊಳಿಸಬೇಕು. ಕೊಲೆಗಾರರು ಹಾಗೂ ಸಂಚುಕೋರರಿಗೆ ಮರಣದಂಡನೆ ಶಿಕ್ಷೆಯಾಗುವಂತೆ ಕ್ರಮ ಜರುಗಿಸಬೇಕು ಮತ್ತು ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಂತ್ರಸ್ತ ಕುಟುಂಬಕ್ಕೆ ಭದ್ರತೆ ಹಾಗೂ ಪರಿಹಾರ ನೀಡಬೇಕು ಮತ್ತು ಕುಟುಂಬದ ಸದಸ್ಯರು ಹಾಗೂ ಪ್ರಕರಣದ ಪ್ರತ್ಯಕ್ಷ ಸಾಕ್ಷಿಗಳಿಗೆ ಸಮರ್ಪಕ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ದೇವದುರ್ಗ | 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಕನ್ನಡ ಪಠ್ಯಪುಸ್ತಕ: ಕಲಿಕೆ ಹಾಗೂ ಪರೀಕ್ಷಾ ಸಿದ್ಧತೆಗೆ ಹೊಡೆತ

ಪ್ರತಿಭಟನೆಯಲ್ಲಿ ಕುಪ್ಪಣ್ಣ ಹೊಸಮನಿ, ಮೋಹನ್ ಗೋಸ್ಲೆ ಕರಡಕಲ್ಲ್, ಹನುಮಂತ ಕುಣೇಕಲ್ಲರು , ನಿಂಗಪ್ಪ ಪಂರಗಿ, ರಮೇಶ್ ಗೋಸ್ಲೆ, ದುರುಗಪ್ಪ ಅಗ್ರಹಾರ, ಗ್ರಾನಪ್ಪ ಆನೆಹೊಸೂರ, ವಿಜಯ್ ಕುಮಾರ್ ಹಟ್ಟಿ,, ಯಲ್ಲಪ್ಪ ಮಾಚನೂರ, ಶರಣಪ್ಪ ಕಟ್ಟಿಮನಿ, ಉಮೇಶ್ ಐಹೋಳಿ, ಅಂಬರೇಶ್ ವೆಂಕಪೂರು, ಜಮ್ಮದಗ್ನಿ ಕೋಟಿ , ಹುಸೇನಪ್ಪ ಕಳ್ಳಿಲಿಂಗಸಗುರು, ಆದೇಶ ನಗನೂರ, ರವಿಕುಮಾರ್ ಕಟ್ಟಿಮನಿ ಮುದ್ಗಲ್, ನಿಂಗಣ್ಣ ಹಟ್ಟಿ, ಸಂಜೀವಪ್ಪ ಛಲವಾದಿ , ಶರಣಪ್ಪ ಹುನಕುಟ್ಟಿ, ಶಿವಪ್ಪ ಮಾಚನೂರ, ಸಿದ್ಧು ಮೇದನಪೂರು , ನಾಗರಾಜ್ ಮ್ಯಾಳಿ, ಅರುಣ್ ಕುಮಾರ್ ಚಿಕ್ಕಹೆಸರುರೂ, ನಾಗರಾಜ್ ಯರಡೋಣ್ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ವಿಶೇಷ ಅಧಿವೇಶನ ರೈತರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಅರ್ಥಹೀನ: ಬಡಗಲಪುರ ನಾಗೇಂದ್ರ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತಹ...

ಉಡುಪಿ | ಹೂಡೆ ರಸ್ತೆಬದಿಯಲ್ಲಿ ಪತ್ತೆಯಾಗಿದ್ದ ನವಜಾತ ಶಿಶುವಿನ ಕಳೇಬರ ದಫನ

ಉಡುಪಿ ನಗರದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ರಸ್ತೆ...