ಲಿಂಗಸುಗೂರು | ಸರ್ಕಾರಿ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Date:

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟನಾರಾಯಣ ಮಿರಿಯಂ ವಹಿಸಿದ್ದರು. ಅವರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಬಳಿಕ ರಾಷ್ಟ್ರಗೀತೆ ಮೊಳಗಿತು.

- Advertisement -

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ರಾಷ್ಟ್ರೀಯ ಏಕತೆ, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಜ್ಯೋತಿಲಕ್ಷ್ಮಿ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯವು ಹಲವಾರು ಹೋರಾಟಗಾರರ ಜಾಗೃತಿ, ಹೋರಾಟ ಹಾಗೂ ಬಲಿದಾನದ ಫಲವಾಗಿ ದೊರೆತಿದೆ. ಇಂದು ನಾವು ಸ್ವಾತಂತ್ರ್ಯದ ಫಲವನ್ನು ಅನುಭವಿಸುತ್ತಿದ್ದು, ಸ್ವಾತಂತ್ರ್ಯಾನಂತರ ಭಾರತ ಸಾಧಿಸಿರುವ ವಿವಿಧ ಕ್ಷೇತ್ರಗಳಲ್ಲಿನ ಬೆಳವಣಿಗೆಗಳ ಕುರಿತು ವಿವರಿಸಿದರು.

ಇದೇ ವೇಳೆ ಶ್ರೀ ಭೀಮಣ್ಣ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು. ದೇಶದ ಪ್ರಗತಿಯಲ್ಲಿ ಯುವಜನತೆಯ ಪಾತ್ರ ಮಹತ್ವದ್ದಾಗಿದ್ದು, ಯುವಕರು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕನ್ನಡ ಸಾಹಿತ್ಯ ಪರಿಷತ್‌ ಅಧಿಕಾರಾವಧಿ 3 ವರ್ಷಕ್ಕೆ ಸೀಮಿತಗೊಳಿಸಲು ಒತ್ತಾಯ

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ರಾಜು ತಂಬಾಕೆ, ನಾರಾಯಣಪ್ಪ ನಾಯಕ, ಮಲ್ಲನಗೌಡ, ಅಮರೇಶ, ಪರಶುರಾಮ ಕೆಂಭಾವಿ, ಪ್ರೊ. ಡಿಎಸ್ ಹುಡೆದಗುಡ್ಡಿ, ಆಂಜನೇಯ, ಡಾ. ಸಂಗನಗೌಡ, ಡಾ.ಹನುಮಂತಪ್ಪ , ಜ್ಯೋತಿಲಕ್ಷ್ಮಿ, ಸಿರಾಜ್ ಅಹ್ಮದ್, ವಿರೇಶ, ನವೀನ ಕುಮಾರ್, ಬೀರಪ್ಪ, ರಾಮಾಂಜನೇಯ, ನಜ್ಮಾಬೇಗಮ್ ಸೇರಿದಂತೆ  ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ...

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ...

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...