ಲಿಂಗಸುಗೂರು | ಆರೋಗ್ಯ ರಕ್ಷಣೆಯೇ ಮಕ್ಕಳ ಆದ್ಯತೆಯಾಗಲಿ: ಸತೀಶ್ ದರ್ಶನಕರ್

Date:

ಯುವಕರು ಮಾದಕ ವ್ಯಸನದ ಜೊತೆಗೆ ಮೊಬೈಲ್‌ ವ್ಯಸನದಿಂದಲೂ ದೂರವಿದ್ದು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಆರೋಗ್ಯ ರಕ್ಷಣೆಯೇ ಮಕ್ಕಳ ಮೊದಲ ಆದ್ಯತೆಯಾಗಬೇಕು ಎಂದು ಸಾರ್ವಜನಿಕ ಆಸ್ಪತ್ರೆ ಲಿಂಗಸುಗೂರಿನ ಐಸಿಟಿಸಿ ಆಪ್ತ ಸಮಾಲೋಚಕರಾದ ಸತೀಶ್ ದರ್ಶನಕರ್ ಹೇಳಿದರು.

- Advertisement -

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್, ಯೂತ್ ರೆಡ್ ಕ್ರಾಸ್, ಎನ್‌ಎಸ್‌ಎಸ್ ಹಾಗೂ ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ರಾಯಚೂರು ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯುವ ದಿನದ ಅಂಗವಾಗಿ ಹದಿಹರೆಯದವರಿಗೆ ಆರೋಗ್ಯ, ಎಚ್‌ಐವಿ/ಏಡ್ಸ್ ಹಾಗೂ ಕ್ಷಯರೋಗದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ದರ್ಶನಕರ್ ಅವರು, ‘ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ–2026’ರ ಸ್ಕ್ಯಾನರ್ ಬಿಡುಗಡೆ ಮಾಡಿದರು. ಎಚ್‌ಐವಿ ಮತ್ತು ಏಡ್ಸ್ ಹರಡುವ ವಿಧಾನಗಳು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಸಾರ್ವಜನಿಕ ಆಸ್ಪತ್ರೆಯ ಹೆಲ್ತ್ ವಿಜಿಟರ್ ಅಮರೇಶ್ ಎಲೆಗಾರ್ ಅವರು ಕ್ಷಯರೋಗದ ಕುರಿತು ಮಾತನಾಡಿ, ಕ್ಷಯರೋಗವು ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ಕುಗ್ಗಿಸುತ್ತದೆ. ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ರವೀಂದ್ರ ಬಳೆಗಾರ ಅವರು ಅಂತಾರಾಷ್ಟ್ರೀಯ ಯುವ ದಿನದ ಮಹತ್ವ ಕುರಿತು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇರುವ ಅವಕಾಶಗಳ ಜೊತೆಗೆ ಯುವಕರನ್ನು ದಾರಿ ತಪ್ಪಿಸುವ ಅನೇಕ ಆಕರ್ಷಣೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟನಾರಾಯಣ ಮಿರಿಯಮ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಮಾರ್ಗಗಳ ಕುರಿತು ತಿಳಿಸಿದರು.

ಯೂತ್ ರೆಡ್ ಕ್ರಾಸ್ ಸಂಚಾಲಕ ಆಂಜನೇಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅಂತಾರಾಷ್ಟ್ರೀಯ ಯುವ ದಿನದ ಮಹತ್ವ ಹಾಗೂ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣದ ಅಗತ್ಯವನ್ನು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಆ.15ರಂದು ಧ್ವಜಾರೋಹಣ ನೆರವೇರಿಸಲಿರುವ ಸಚಿವ ಅಜಯ್ ಸಿಂಗ್

ಕಾರ್ಯಕ್ರಮದಲ್ಲಿ ಯೂತ್ ರೆಡ್ ಕ್ರಾಸ್ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಭಾಗವಹಿಸಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ರಾಮಾಂಜನಿ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ತಿಕ್ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...