ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ

Date:

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಸಮೀಪ ಮೂವತ್ತು ವರ್ಷಗಳಿಂದ ವಾಸಿಸುತ್ತಿರುವ ಸುಡುಗಾಡು ಸಿದ್ಧರ ಕೇರಿಗೆ ಮೂಲಭೂತ ಸೌಕರ್ಯ ಒದಗಿಸಲು ಅಲೆಮಾರಿ ಜಾಗೃತ ಸಂಘದ ಅಧ್ಯಕ್ಷ ಬಸವರಾಜ ಹಟ್ಟಿ, ಉಪಾಧ್ಯಕ್ಷ ಗಂಗಾಧರ್ ಶಂಖು ನಿಯೋಗದ ವತಿಯಿಂದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಮನವಿ ಪತ್ರ ಸ್ವೀಕರಿಸಿದ ಪಂಚಾಯತ್ ಕರ ವಸೂಲಿ ಅಧಿಕಾರಿ ಅಕ್ರಮ್ ಅವರು ವಾರದೊಳಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ನಾವು ಹಟ್ಟಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾಮನಕಲ್ಲೂರು ಕ್ರಾಸ್ ಹತ್ತಿರದ ಬಸವ ಜ್ಯೋತಿ ನಗರದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಅಲೆಮಾರಿ ಪಟ್ಟಿಯಲ್ಲಿ ಬರುವ ಸುಡುಗಾಡು ಸಿದ್ಧ ಜನಾಂಗದವರಾಗಿದ್ದು, ಸುಮಾರು ಮೂರು ದಶಕಗಳ ಕಾಲ ಇಲ್ಲಿಯ ನಿವಾಸಿಗಳಾಗಿದ್ದು, ಆಗಿನಿಂದಲೂ ನಮ್ಮ ಓಣಿಯಲ್ಲಿ ಹಲವು ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಸಾರ್ವಜನಿಕ ಸಮಸ್ಯೆಗಳು ದೀರ್ಘಕಾಲದಿಂದ ಪಂಚಾಯತ್ ಆಡಳಿತದ ನಿರ್ಲಕ್ಷ್ಯ ಧೋರಣೆಯಿಂದ ಹಾಗೆಯೇ ಮುಂದುವರೆದಿವೆ. ಈ ಸಮಸ್ಯೆಗಳಿಂದ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಎಲ್ಲಾ ನಿವಾಸಿಗಳು ದಿನನಿತ್ಯ ತೊಂದರೆ ಅನುಭವಿಸುವಂತಾಗಿದೆ. ಮುಖ್ಯಾಧಿಕಾರಿಗಳು ಈ ಮನವಿಯನ್ನು ತುರ್ತು ಸಾರ್ವಜನಿಕ ಸಮಸ್ಯೆಗಳ ಮನವಿಯಾಗಿ ಪರಿಗಣಿಸಿ, ಸ್ಥಳ ಪರಿಶೀಲನೆ ನಡೆಸಿ, ಒಂದು ವಾರದೊಳಗೆ ತುರ್ತು ಸಮಸ್ಯೆಗಳನ್ನು, ಮಿಕ್ಕ ಸಮಸ್ಯೆಗಳನ್ನು ಗರಿಷ್ಠ ಹದಿನೈದು ದಿನಗಳೊಳಗಾಗಿ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಒತ್ತಾಯಿಸಿತು.

ಕುಡಿಯುವ ನೀರು, ಮಹಿಳಾ ಶೌಚಾಲಯ, ಚರಂಡಿ, ಗುಮ್ಮಿಯ ದುರಸ್ತಿ, ಸೊಳ್ಳೆ ನಿಯಂತ್ರಣ, ಬೀದಿ ದೀಪಗಳ ಕೊರತೆ, ರಸ್ತೆಗಂಟಿದ ಗಿಡಗಂಟಿಗಳ ತೆರವುಗೊಳಿಸುವಿಕೆ ಹೀಗೆ ಎಲ್ಲಾ ಸಮಸ್ಯೆಗಳು ನಮ್ಮ ಜನರ ದೈನಂದಿನ ಜೀವನ, ಸಾರ್ವಜನಿಕ ಆರೋಗ್ಯ, ಸ್ವಚ್ಛತೆ ಹಾಗೂ ಸುರಕ್ಷತೆಗೆ ನೇರವಾಗಿ ಸಂಬಂಧಿಸಿದ ಸಮಸ್ಯೆಗಳಾಗಿವೆ. ಆದ್ದರಿಂದ, ಮಾನ್ಯ ಮುಖ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನಮ್ಮ ಬಸವ ಜ್ಯೋತಿ ನಗರಕ್ಕೆ ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಅಗತ್ಯ ಕ್ರಮ ಕೈಗೊಂಡು, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹಾರ ಕಲ್ಪಿಸಬೇಕು. ವಾರದೊಳಗೆ ಸಮಸ್ಯೆಗಳನ್ನು ಪರಿಹರಿಸದ್ದಿದ್ದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಿಯೋಗದಲ್ಲಿ ನಿವಾಸಿಗಳಾದ ಮಲ್ಲಿಕಾರ್ಜುನ ಶಂಖು, ಈರೇಶ(ಚಿಟ್ಟಿ), ರವಿಕುಮಾರ್, ಗೋಪಾಲ, ಶೇಖರ್, ನಾಗಲಿಂಗ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಉಡುಪಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ರದ್ದುಪಡಿಸುವುದು, ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ...

ಉಡುಪಿ | ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ : ಸಚಿವ ಶಿವರಾಜ ತಂಗಡಗಿ

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು...

ಚಿಕ್ಕಮಗಳೂರು | ಸೆ. 26ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ...