ಸೋನಮ್ ವಾಂಗ್‌ಚುಕ್ ಹೋರಾಟ ಬೆಂಬಲಿಸಿ ನಾಳೆ ಸಿಂಧನೂರಿನಲ್ಲಿ ಪ್ರತಿಭಟನೆ

Date:

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮತ್ತು ವಿದ್ಯಾರ್ಥಿ ಸಂಘಟನೆಗಳು ನವದೆಹಲಿಯ ಜಂತರ್‌ಮಂತರ್‌ನಲ್ಲಿ ಕಳೆದ 18 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ನಾಳೆ (ಜುಲೈ 17) ರಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕರಾದ ಚಂದ್ರಶೇಖರ ಗೊರಬಾಳ, ಡಿ.ಎಚ್. ಕಂಬಳಿ, ಎಸ್. ದೇವೇಂದ್ರಗೌಡ, ನಾಗರಾಜ ಪೂಜಾರ್ ಹಾಗೂ ಬಸವರಾಜ ಬಾದರ್ಲಿ ತಿಳಿಸಿದ್ದಾರೆ.

- Advertisement -

ಪತ್ರಿಕಾ ಪ್ರಕಟಣೆಯಲ್ಲಿ ನೀಡಿರುವ ಅವರು, ಜುಲೈ 17ರಂದು ಬೆಳಿಗ್ಗೆ 10.30ಕ್ಕೆ ನಗರದ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ, ಕೇಂದ್ರ ಸರ್ಕಾರದ ಶಿಕ್ಷಣ ನೀತಿ, ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಳೆದ ಸುಮಾರು 18 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಯಾವುದೇ ಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವಿಗಳನ್ನು ಆಲಿಸದಿರುವುದು ಸರ್ಕಾರದ ನಿರ್ಲಕ್ಷ್ಯದ ಧೋರಣೆಯನ್ನು ಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ತಹಸೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಕೃಷಿ ಹೊಂಡದಲ್ಲಿ ಬಿದ್ದು ವಕೀಲ ಸಾವು

ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ಹಾಗೂ ವಿವಿಧ ಪ್ರಜಾಸತ್ತಾತ್ಮಕ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧರಣಿಯನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...