ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ (ಬಿಇಒ) ರಾಧಾದೇವಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಸಂಜೆ ಆದೇಶ ಹೊರಡಿಸಿದೆ.
ರಾಧಾದೇವಿ ಅವರು ಈ ಹಿಂದೆ ದೇವದುರ್ಗ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಯಚೂರಿನ ಬಿಇಒ ಆಗಿದ್ದ ಈರಣ್ಣ ಕೋಸಗಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇದೀಗ ರಾಧಾದೇವಿ ಅವರನ್ನು ನೇಮಕ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಪೋತ್ನಾಳ ಗ್ರಂಥಾಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸ್ಪರ್ಧಾರ್ಥಿಗಳ ಪ್ರತಿಭಟನೆ
ಈರಣ್ಣ ಕೋಸಗಿ ಅವರನ್ನು ಯರಮರಸ್‌ನ ಡಯಟ್ ಸಂಸ್ಥೆಯ ಉಪನ್ಯಾಸಕರ ಖಾಲಿ ಹುದ್ದೆಗೆ ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.



