ರಾಯಚೂರು | ಅಪಘಾತದಲ್ಲಿ ಮೃತಪಟ್ಟ ಆರೋಗ್ಯ ಇಲಾಖೆ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್ ವಿತರಣೆ

Date:

ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ಆರೋಗ್ಯ ಇಲಾಖೆಯ ಸರ್ಕಾರಿ ನೌಕರ ಅರುಣ ಕುಮಾರ ಅವರ ಕುಟುಂಬಕ್ಕೆ ₹1 ಕೋಟಿ ಮೊತ್ತದ ಪರಿಹಾರ ಚೆಕ್ ಅನ್ನು ಇಂದು ವಿತರಿಸಲಾಯಿತು.

- Advertisement -

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳವರ ನೇತೃತ್ವದಲ್ಲಿ, ಮಹಾನಗರ ಪಾಲಿಕೆ ಆಯುಕ್ತರು, ಸರ್ಕಾರಿ ನೌಕರರ ಸಂಘದ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಎಸ್‌ಬಿಐ ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಪರಿಹಾರ ಚೆಕ್ ಹಸ್ತಾಂತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಈ ವೇಳೆ ಮೃತ ನೌಕರರ ಕುಟುಂಬ ಸದಸ್ಯರಿಗೆ ಸಾಂತ್ವನ ಸೂಚಿಸಿದ ಜಿಲ್ಲಾಧಿಕಾರಿಗಳವರು, ಸರ್ಕಾರದ ವಿವಿಧ ಯೋಜನೆಗಳು ಸಂಕಷ್ಟದ ಸಂದರ್ಭಗಳಲ್ಲಿ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುತ್ತವೆ ಎಂದು ತಿಳಿಸಿದರು. ಮೃತ ಅರುಣ ಕುಮಾರ ಅವರ ಸೇವೆಯನ್ನು ಸ್ಮರಿಸಿದ ಅವರು, ಕುಟುಂಬದೊಂದಿಗೆ ಸರ್ಕಾರ ಹಾಗೂ ಸರ್ಕಾರಿ ನೌಕರರ ಸಂಘ ಸದಾ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಿ, ಸರ್ಕಾರಿ ನೌಕರರು ವೇತನ ಪ್ಯಾಕೇಜ್ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಸಂಘದ ಪದಾಧಿಕಾರಿಗಳು ಮೃತ ನೌಕರರ ಕುಟುಂಬಕ್ಕೆ ಧೈರ್ಯ ತುಂಬಿ, ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಷ್ಟ್ರಪತಿಗಳೊಂದಿಗೆ ಸಂವಾದ; ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಗೌತಮ್‌ಗೆ ಸ್ಥಾನ

ಕಾರ್ಯಕ್ರಮದಲ್ಲಿ ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಶ್ರೀ ಜುಬೀನ್ ಮೋಹಪಾತ್ರ, ಎಸ್‌ಬಿಐ ಬ್ಯಾಂಕ್ ಅಧಿಕಾರಿಗಳು, ಸಂಘದ ಪದಾಧಿಕಾರಿ ಶ್ರೀ ಶಂಕರಗೌಡ ಎಸ್. ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು, ನೌಕರರು ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...