ರಾಯಚೂರು | 761 ಅಂಗನವಾಡಿಗಳಿಗಿಲ್ಲ ಸ್ವಂತ ಸೂರು: ಸೋರುವ ಕೊಠಡಿಗಳಲ್ಲೇ ಮಕ್ಕಳ ಊಟ, ಪಾಠ

Date:

ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸುವತ್ತ ತಕ್ಷಣ ಕ್ರಮ ಕೈಗೊಳ್ಳಬೇಕು. ಇದರಿಂದ ಮಾತ್ರ ಮಕ್ಕಳ ಪೌಷ್ಠಿಕಾಂಶ, ಆರೋಗ್ಯ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣದ ಗುರಿಗಳನ್ನು ಪೂರ್ಣವಾಗಿ ಸಾಧಿಸಲು ಸಾಧ್ಯ. ಮಕ್ಕಳ ಭವಿಷ್ಯವೇ ರಾಷ್ಟ್ರದ ಭವಿಷ್ಯವಾಗಿರುವುದರಿಂದ, ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ಒದಗಿಸುವುದು ಕಾಲದ ಅಗತ್ಯವಾಗಿದೆ.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಮಕ್ಕಳ ಆರೈಕೆ, ಪೌಷ್ಠಿಕಾಂಶ, ಆರೋಗ್ಯ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ ವಹಿಸುತ್ತಿವೆ. ಆದರೆ ಮಕ್ಕಳ ಭವಿಷ್ಯ ರೂಪಿಸುವ ಈ ಕೇಂದ್ರಗಳಲ್ಲೇ ಸ್ವಂತ ಕಟ್ಟಡದ ಕೊರತೆ ಕಾಡುತ್ತಿದ್ದು, ಜಿಲ್ಲೆಯ ಇಂದಿಗೂ ಬಾಡಿಗೆ ಮತ್ತು ಇತರೆ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿರುವ ನೂರಾರು ಅಂಗನವಾಡಿಗಳಿಗಿಲ್ಲ ಸ್ವಂತ ಸೂರು. ಹಾಗಾಗಿ ಸೋರುವ ಕೊಠಡಿಗಳಲ್ಲೇ ಮಕ್ಕಳು ಕಲಿಯುತ್ತಿರುವುದು, ಆಹಾರ ಸೇವಿಸುತ್ತಿರುವುದು ವಿಪರ್ಯಾಸವಾಗಿದೆ.

- Advertisement -

ರಾಯಚೂರು ಜಿಲ್ಲೆಯಲ್ಲಿ ಒಟ್ಟು 2,856 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ 1,919 ಕೇಂದ್ರಗಳಿಗೆ ಮಾತ್ರ ಸ್ವಂತ ಕಟ್ಟಡಗಳಿವೆ. 761 ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ, 94 ಕೇಂದ್ರಗಳು ಶಾಲಾ ಕಟ್ಟಡಗಳಲ್ಲಿ, 5 ಪಂಚಾಯಿತಿ ಕಟ್ಟಡಗಳಲ್ಲಿ, 47 ಸಮುದಾಯ ಭವನಗಳಲ್ಲಿ ಹಾಗೂ 30 ಕೇಂದ್ರಗಳು ಇತರೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಸ್ವಂತ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳ ಪೈಕಿ ಹಲವು ಕೇಂದ್ರಗಳು ಹಳೆಯ ಹಾಗೂ ಶಿಥಿಲಗೊಂಡ ಕೊಠಡಿಗಳನ್ನು ಹೊಂದಿವೆ. ಮಳೆಗಾಲ ಆರಂಭವಾದರೆ ಮೇಲ್ಛಾವಣಿ ಸೋರುವುದು, ಕೇಂದ್ರದೊಳಗೆ ನೀರು ನುಗ್ಗುವುದು ಹಾಗೂ ಗೋಡೆಗಳು ಹಾನಿಗೊಳಗಾಗುವುದು ಸಾಮಾನ್ಯವಾಗಿದೆ.

ಕೆಲವು ಕಡೆಗಳಲ್ಲಿ ಕಟ್ಟಡದ ಒಂದು ಭಾಗದ ಗೋಡೆಗಳು ಬಿರುಕು ಬಿಟ್ಟಿರುವುದು ಕಂಡುಬಂದಿದ್ದು, ಮಕ್ಕಳ ಸುರಕ್ಷತೆ ಕುರಿತು ಪೋಷಕರಲ್ಲಿ ಆತಂಕ ಮೂಡಿಸಿದೆ. ಹಳೆಯ ಕಟ್ಟಡಗಳಲ್ಲಿ ಮಕ್ಕಳನ್ನು ಕೂರಿಸಿ ಪಾಠ ಮಾಡುವುದು ಹಾಗೂ ಪೌಷ್ಠಿಕ ಆಹಾರ ವಿತರಿಸುವುದು ಅಂಗನವಾಡಿ ಕಾರ್ಯಕರ್ತೆಯರಿಗೆ ಸವಾಲಾಗಿ ಪರಿಣಮಿಸಿದೆ.

ಬಾಡಿಗೆ ಕಟ್ಟಡಗಳಲ್ಲಿ ಮೂಲಸೌಕರ್ಯ ಕೊರತೆ

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿಗಳಿಗೆ ಸ್ಥಳಾವಕಾಶದ ಕೊರತೆ ಮತ್ತೊಂದು ಪ್ರಮುಖ ಸಮಸ್ಯೆಯಾಗಿದೆ. ಮಕ್ಕಳಿಗೆ ಅಗತ್ಯವಾದ ಶೌಚಾಲಯ, ಕುಡಿಯುವ ನೀರು, ಅಡುಗೆ ಕೋಣೆ, ಆಟದ ಸ್ಥಳ ಸೇರಿದಂತೆ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ದೊರೆಯದಿರುವ ಸಾಧ್ಯತೆ ಹೆಚ್ಚಿದೆ.

ಅಂಗನವಾಡಿ ಎಂದರೆ ಕೇವಲ ಪೌಷ್ಠಿಕ ಆಹಾರ ವಿತರಿಸುವ ಕೇಂದ್ರವಲ್ಲ. 3-6 ವರ್ಷದ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ, ಪೌಷ್ಠಿಕಾಂಶ, ಆರೋಗ್ಯ ತಪಾಸಣೆ ಹಾಗೂ ಮಕ್ಕಳ ಸಮಗ್ರ ಬೆಳವಣಿಗೆಗೆ ಅಗತ್ಯವಾದ ಸೇವೆಗಳನ್ನು ಒದಗಿಸುವ ಪ್ರಮುಖ ಕೇಂದ್ರವಾಗಿದೆ. ಹೀಗಾಗಿ ಮಕ್ಕಳ ಸುರಕ್ಷತೆ ಹಾಗೂ ಆರೋಗ್ಯಕ್ಕೆ ಅನುಕೂಲವಾಗುವಂತಹ ಸುಸಜ್ಜಿತ ಕಟ್ಟಡ ಅತ್ಯಗತ್ಯವಾಗಿದೆ.

ಗರ್ಭಿಣಿ, ಬಾಣಂತಿಯರಿಗೂ ಸೇವೆ

ಅಂಗನವಾಡಿ ಕೇಂದ್ರಗಳ ಸೇವೆ ಮಕ್ಕಳಿಗಷ್ಟೇ ಸೀಮಿತವಾಗಿಲ್ಲ. ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಠಿಕಾಂಶ, ಆರೋಗ್ಯದ ಬಗ್ಗೆ ಅರಿವು ಹಾಗೂ ಅಗತ್ಯ ಮಾರ್ಗದರ್ಶನ ನೀಡುವಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಾರೆ. ಇಂತಹ ಸೇವೆಗಳನ್ನು ಒದಗಿಸುವ ಕೇಂದ್ರಗಳೇ ಸೂಕ್ತ ಕಟ್ಟಡ ಹಾಗೂ ಮೂಲಸೌಕರ್ಯಗಳಿಲ್ಲದೆ ಕಾರ್ಯನಿರ್ವಹಿಸುವುದು ವ್ಯವಸ್ಥೆಯ ವೈರುಧ್ಯವನ್ನು ತೋರಿಸುತ್ತದೆ.

ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಕಲ್ಪಿಸುವ ಯೋಜನೆಗಳು ಹಲವು ವರ್ಷಗಳಿಂದ ಜಾರಿಯಲ್ಲಿದ್ದರೂ, ಇನ್ನೂ ನೂರಾರು ಕೇಂದ್ರಗಳು ಬಾಡಿಗೆ ಹಾಗೂ ಇತರೆ ಕಟ್ಟಡಗಳನ್ನು ಅವಲಂಬಿಸಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ.

ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ವಂತ ಕಟ್ಟಡವಿಲ್ಲದ ಅಂಗನವಾಡಿಗಳ ಸಮಗ್ರ ಪಟ್ಟಿ ಸಿದ್ಧಪಡಿಸಿ, ಅಗತ್ಯ ಜಾಗ ಗುರುತಿಸಿ, ಹಂತ ಹಂತವಾಗಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಶಿಥಿಲಗೊಂಡಿರುವ ಕಟ್ಟಡಗಳ ತುರ್ತು ದುರಸ್ತಿ, ಕುಡಿಯುವ ನೀರು, ಶೌಚಾಲಯ, ಅಡುಗೆ ಕೋಣೆ ಹಾಗೂ ಮಕ್ಕಳಿಗೆ ಸುರಕ್ಷಿತ ಆಟದ ಸ್ಥಳ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು.

ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳಿಗೇ ಸ್ವಂತ ಸೂರು ಇಲ್ಲದಿರುವುದು ಎಷ್ಟರ ಮಟ್ಟಿಗೆ ಸಮಂಜಸ? 761 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿ ಮುಂದುವರಿಯಬೇಕೇ? ಮಕ್ಕಳಿಗೆ ಸ್ವಂತ ಸೂರು ಸಿಗುವುದು ಯಾವಾಗ? ಎಂಬ ಪ್ರಶ್ನೆ ಇದೀಗ ಪೋಷಕರು ಹಾಗೂ ಗ್ರಾಮಸ್ಥರಿಂದ ಕೇಳಿಬರುತ್ತಿದೆ.

ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಅಂಗನವಾಡಿ ಕೇಂದ್ರಗಳು ಅನಿವಾರ್ಯವಾದ ಪಾತ್ರವನ್ನು ವಹಿಸುತ್ತಿವೆ. ಆದರೆ ಈ ಕೇಂದ್ರಗಳಿಗೆ ಸ್ವಂತ ಕಟ್ಟಡಗಳ ಕೊರತೆ ಇರುವುದು ಮಕ್ಕಳ ಭವಿಷ್ಯಕ್ಕೆ ದೊಡ್ಡ ಅಡಚಣೆಯಾಗಿದೆ. ಬಾಡಿಗೆ ಹಾಗೂ ಇತರೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರಾರು ಅಂಗನವಾಡಿಗಳು ಮಕ್ಕಳಿಗೆ ಸುರಕ್ಷಿತ, ಸ್ವಚ್ಛ ಹಾಗೂ ಸೂಕ್ತ ವಾತಾವರಣವನ್ನು ಒದಗಿಸಲು ವಿಫಲವಾಗುತ್ತಿವೆ.

ಇದನ್ನೂ ಓದಿದ್ದೀರಾ? ವಿಜಯಪುರ | ಆ.25ರಂದು ಈದ್ ಮಿಲಾದ್: ಸೌಹಾರ್ದಯುತ ಮೆರವಣಿಗೆಗೆ ಮುಂಜಾಗ್ರತಾ ಕ್ರಮ

ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸುವತ್ತ ತಕ್ಷಣ ಕ್ರಮ ಕೈಗೊಳ್ಳಬೇಕು. ಇದರಿಂದ ಮಾತ್ರ ಮಕ್ಕಳ ಪೌಷ್ಠಿಕಾಂಶ, ಆರೋಗ್ಯ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣದ ಗುರಿಗಳನ್ನು ಪೂರ್ಣವಾಗಿ ಸಾಧಿಸಲು ಸಾಧ್ಯ. ಮಕ್ಕಳ ಭವಿಷ್ಯವೇ ರಾಷ್ಟ್ರದ ಭವಿಷ್ಯವಾಗಿರುವುದರಿಂದ, ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ಒದಗಿಸುವುದು ಕಾಲದ ಅಗತ್ಯವಾಗಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ಉಡುಪಿ | ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕಿ: ಕಥೊಲಿಕ್ ಸಭಾ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...