ರಾಯಚೂರು | ರೇಷನ್ ಕಾರ್ಡ್ ಬಯೋಮೆಟ್ರಿಕ್ ನೀಡದ್ದಕ್ಕೆ ಜೀವಂತ ಮಹಿಳೆ ಮೃತ ಎಂದು ದಾಖಲೆ; ಉಚಿತ ಚಿಕಿತ್ಸೆಗೆ ತೊಂದರೆ

Date:

ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ನೀಡಿಲ್ಲ ಎಂಬ ಕಾರಣಕ್ಕೆ ಬದುಕಿರುವ ಮಹಿಳೆ ಮರಣ ಹೊಂದಿದ್ದಾರೆ ಎಂದು ತೋರಿಸುತ್ತಿದ್ದು, ಇದೀಗ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಇವರಿಗೆ ಚಿಕಿತ್ಸೆ ಪಡೆಯಲು ತೊಂದರೆ ಉಂಟಾಗುತ್ತಿದ್ದು ರೇಷನ್ ಕಾರ್ಡ್ ನೀಡಿದರೂ ಚಿಕಿತ್ಸೆ ದೊರೆಯದಂತಾಗಿದೆ ಎಂದು ಬೆಳಕಿಗೆ ಬಂದಿದೆ.

ರಾಯಚೂರು ನಗರ ನಿವಾಸಿ ಖಾಜಾಬೀ ಎಂಬುವವರು, ಮುಂಬೈಗೆ ದುಡಿಯಲು ಹೋಗಿದ್ದು ಆದ್ದರಿಂದ ಕಳೆದ ಒಂದು ವರ್ಷದಿಂದ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ನೀಡಿದ್ದಿಲ್ಲ. ಇತ್ತೀಚೆಗೆ ಖಾಜಾಬೀ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆವೊಂದರಲ್ಲಿ ಚಿಕಿತ್ಸೆಯಲ್ಲಿ ಪಡೆಯುತ್ತಿದ್ದಾರೆ. ಉಚಿತ ಚಿಕಿತ್ಸೆಗೆ ಕುಟುಂಬದವರು ಆರೋಗ್ಯ ಸೌಲಭ್ಯದಡಿ ಆಸ್ಪತ್ರೆಗೆ ಚಿಕಿತ್ಸೆಗೆ ಮುಂದಾದಾಗ ರೇಷನ್ ಕಾರ್ಡ್ ನೀಡಿದ್ದಾರೆ ಅದರಲ್ಲಿ ಮರಣ ಹೊಂದಿದ್ದಾರೆ ಎಂದು ತೋರಿಸಿದ್ದು, ಕುಟುಂಬದವರು ಆಶ್ಚರ್ಯದೊಂದಿಗೆ ಆತಂಕಕ್ಕೆ ಸಿಲುಕಿದ್ದಾರೆ.

ಬದುಕಿರುವ ಮಹಿಳೆಯನ್ನು ಸರ್ಕಾರಿ ದಾಖಲೆಗಳಲ್ಲಿ ಮರಣ ಹೊಂದಿದ್ದಾರೆ ಎಂಬುವುದನ್ನು ಕಂಡು ಕುಟುಂಬ ಸದಸ್ಯರು ಗಾಬರಿಗೊಂಡಿದ್ದು, ಇದೀಗ ಬಿಪಿಎಲ್ ಕಾರ್ಡ್ ನೀಡಿದರೂ ಚಿಕಿತ್ಸೆ ದೊರೆಯದಂತಾಗಿದೆ. ಮತ್ತು ಚಿಕಿತ್ಸೆಯನ್ನು ಕೊಡಿಸಲು ಕುಟುಂಬದವರಿಗೆ ಕಷ್ಟಕರವಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷಾಟನೆ ಹೆಚ್ಚಳ; ಕ್ರಮಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸರ್ಕಾರದ ಈ ಗೊಂದಲದ ನಿಯಮಗಳಿಂದ ಬಡ ಜನರು ಸಂಕಷ್ಟ ಪಡುವಂತಾಗಿದ್ದು, ಕೂಡಲೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಈ ಗೊಂದಲ ನಿವಾರಿಸಲು ಮತ್ತು ಖಾಜಬೀ ಸೇರಿ ಇಂತಹ ಘಟನೆಗಳಿಗೆ ಒಳಗಾದ ಜನರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು ಎನ್ನುವುದು ಕುಟುಂಬಸ್ಥರ ಮನವಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...