ರಾಯಚೂರು | ರಸ್ತೆಯೋ, ಕೆಸರುಗದ್ದೆಯೋ? ಐದನಾಳ ಎಸ್‌ಸಿ ವಾರ್ಡ್‌ನಲ್ಲಿ ಜನರ ಪರದಾಟ

Date:

ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಐದನಾಳ ಗ್ರಾಮದ ಎಸ್‌ಸಿ ವಾರ್ಡ್‌ನಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗದೆ ಮನೆಗಳ ಮುಂಭಾಗವೇ ನಿಂತುಕೊಳ್ಳುತ್ತಿರುವುದರಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ವಾರ್ಡ್‌ನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ವಾರ್ಡ್‌ನ ಬಹುತೇಕ ರಸ್ತೆಗಳು ಹಾಳಾಗಿದ್ದು, ಚರಂಡಿಗಳು ಸಮರ್ಪಕವಾಗಿ ನಿರ್ಮಾಣವಾಗದಿರುವುದು ಹಾಗೂ ಇದ್ದ ಚರಂಡಿಗಳಲ್ಲಿ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ಬಂದಾಗ ರಸ್ತೆಯೇ ಜಲಾವೃತವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಮನೆಗಳ ಮುಂಭಾಗದಲ್ಲಿ ದಿನಗಟ್ಟಲೆ ನೀರು ನಿಂತುಕೊಳ್ಳುತ್ತಿದ್ದು, ಕೆಲವೆಡೆ ಮನೆಗಳೊಳಗೆ ನೀರು ನುಗ್ಗುವ ಹಂತಕ್ಕೆ ತಲುಪಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ನಿಂತ ನೀರಿನಿಂದ ರಸ್ತೆಗಳು ಕೆಸರುಮಯವಾಗುತ್ತಿದ್ದು, ಸಾರ್ವಜನಿಕರು ಓಡಾಡಲು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ವಿಶೇಷವಾಗಿ ವಯೋವೃದ್ಧರು ಹಾಗೂ ಮಕ್ಕಳು ರಸ್ತೆಯಲ್ಲಿ ಸಂಚರಿಸುವಾಗ ಕಾಲು ಜಾರಿ ಬೀಳುವ ಘಟನೆಗಳು ಸಂಭವಿಸುತ್ತಿವೆ. ಶಾಲೆಗೆ ತೆರಳುವ ಮಕ್ಕಳು ಚರಂಡಿ ನೀರು ಹಾಗೂ ಕೆಸರು ತುಂಬಿದ ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಹಿಳೆಯರು ದೂರಿದರು.

1000003315

ಸೊಳ್ಳೆಗಳ ಕಾಟ, ಆರೋಗ್ಯದ ಆತಂಕ

ಮನೆಗಳ ಮುಂಭಾಗ ಹಾಗೂ ರಸ್ತೆ ಬದಿಯಲ್ಲಿ ಕೊಳಚೆ ನೀರು ನಿಂತಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದೆ. ಇದರಿಂದ ಮಕ್ಕಳು ಹಾಗೂ ವಯೋವೃದ್ಧರು ಸೇರಿದಂತೆ ಸ್ಥಳೀಯ ನಿವಾಸಿಗಳಲ್ಲಿ ವಿವಿಧ ಅನಾರೋಗ್ಯದ ಭೀತಿ ಎದುರಾಗಿದೆ. ಚರಂಡಿ ನೀರಿನಲ್ಲೇ ಮಕ್ಕಳು ನಡೆದುಕೊಂಡು ಶಾಲೆಗೆ ತೆರಳುತ್ತಿರುವುದರಿಂದ ಚರ್ಮ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ನಿವಾಸಿಗಳು ಆರೋಪಿಸಿದರು.

ಈ ಕುರಿತು ಸ್ಥಳೀಯ ನಿವಾಸಿ ರಾಧಾ ಮಾತನಾಡಿ, ಸುಮಾರು ತಿಂಗಳಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆ ನೀರು ನಿಂತು ಮನೆಯೊಳಗೆ ನುಗ್ಗುವ ಹಂತಕ್ಕೆ ಬಂದಿದೆ. ಈ ಹಿಂದೆ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸಿಲ್ಲ. ಮನೆಯಲ್ಲಿ ಮಕ್ಕಳು ಹಾಗೂ ವೃದ್ಧರು ಇರುವುದರಿಂದ ಆರೋಗ್ಯದ ಬಗ್ಗೆ ಆತಂಕ ಎದುರಾಗಿದೆ. ಮಕ್ಕಳು ಶಾಲೆಗೆ ಹೋಗುವಾಗ ಚರಂಡಿ ನೀರಿನಲ್ಲೇ ಸಾಗಬೇಕಾಗಿದೆ. ಇದರಿಂದ ಮಕ್ಕಳಿಗೆ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಅಧಿಕಾರಿಗಳು ಕೂಡಲೇ ಗಮನಹರಿಸಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

1000003317

ಪರ್ಯಾಯ ನೀರು ಹರಿವು ವ್ಯವಸ್ಥೆ: ತಹಶೀಲ್ದಾರ್

ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ತಹಶೀಲ್ದಾರ್, ಚರಂಡಿ ನೀರು ಹರಿದು ಹೋಗುವ ದಿಕ್ಕಿನಲ್ಲಿ ಮುಂದೆ ಹೊಲಗಳು ಇರುವುದರಿಂದ ಸಮಸ್ಯೆ ಉಂಟಾಗಿರುವ ಬಗ್ಗೆ ಪರಿಶೀಲನೆ ನಡೆಸಿ, ನೀರು ಸರಾಗವಾಗಿ ಹರಿದು ಹೋಗಲು ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ: ನ್ಯಾಯಾಲಯದ ಆದೇಶದ ಮೇರೆಗೆ ಎಸ್‌ಡಿಎಂ ಕಚೇರಿ ಪೀಠೋಪಕರಣ, ಕಂಪ್ಯೂಟರ್ ಜಪ್ತಿ

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಸ್‌ಸಿ ವಾರ್ಡ್‌ನ ಮೂಲಸೌಕರ್ಯ ಸಮಸ್ಯೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಹದಗೆಟ್ಟ ರಸ್ತೆಗಳ ದುರಸ್ತಿ, ಸಮರ್ಪಕ ಚರಂಡಿ ನಿರ್ಮಾಣ ಹಾಗೂ ಮಳೆ ನೀರು ನಿಲ್ಲದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮಹಿಳೆಯರು ಆಗ್ರಹಿಸಿದ್ದಾರೆ. ಸಮಸ್ಯೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳಿಯಾಳ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಪರ್ಸ್‌ ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಮಹಿಳೆ

ಹಳಿಯಾಳ: ರಸ್ತೆಯಲ್ಲಿ ದೊರೆತ ಚಿನ್ನಾಭರಣ ಹಾಗೂ ನಗದು ಹೊಂದಿದ್ದ ಪರ್ಸ್‌ನ್ನು ಪೊಲೀಸರಿಗೆ...

ಸೆ.27ರಂದು ಜಗನ್ಮೋಹನ್ ಅರಮನೆಯಲ್ಲಿ ‘ಸಾರ್ವಜನಿಕ ಸೀರತ್ ಸಮಾವೇಶ’

ಪ್ರವಾದಿ ಮುಹಮ್ಮದ್(ಸ) ಅವರ ಜೀವನ ಸಂದೇಶ ಹಾಗೂ ಅವರು ಬೋಧಿಸಿದ ಉದಾತ್ತ...

ಬಾಗಲಕೋಟೆ | ಮೀನುಗಾರಿಕೆ ಅಭಿವೃದ್ಧಿ ಯೋಜನೆ: ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲೆ ಮೀನುಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ...

ಮಂಗಳೂರು | ಜ್ಯೂನಿಯರ್ಸ್‌ ಮೇಲೆ ಕ್ರೂರ ರ‍್ಯಾಂಗಿಂಗ್; 9 ಮಂದಿ ವಿರುದ್ಧ ಎಫ್‌ಐಆರ್

ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ಬಿಬಿಎ ...