ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

Date:

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಈ ಸಮಸ್ಯೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ರಹಮಾನ್ ಕ್ಯಾದಿಗೇರಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

- Advertisement -

ನಾನೂ ಕೂಡ ಒಬ್ಬ ಅಂಗವಿಕಲ ಇದ್ದು, ಕೆಲ ಸರಕಾರಿ ಸೌಲಭ್ಯಗಳು ಪಡೆಯಲು ತಾಲೂಕ ಕಚೇರಿಗಳಿಗೆ ಅಲೆಯುವಂತಾಗಿದ್ದು, ನಿಗದಿತ ಸಮಯಕ್ಕೆ ಕಚೇರಿಗೆ ಹೋದಾಗ ಕಂದಾಯ ಅಧಿಕಾರಿಗಳು ಕಚೇರಿಗೆ ಬಾರದೇ ಕಾರಣ ನೆಪಗಳು ಹೇಳಿಕೊಂಡು ಜನರ ಕೈಯಿಗೆ ಸಿಗುತ್ತಿಲ್ಲ. ರಾಜ್ಯ ಮತ್ತು ಕೇಂದ್ರ ಸರಕಾರದ ಹಲವು ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳು ಸಿಗಬೇಕು ಎಂಬ ಮಾತು ಹೇಳಿಕೆಗೆ ಸಿಮೀತಗೊಂಡಿದ್ದು, ಜನಸಾಮಾನ್ಯರು ಕಚೇರಿಗಳಿಗೆ ಅಲೆಯುವಂತಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ನಾಡಕಚೇರಿಯಲ್ಲಿ ಅಧಿಕಾರಿಗಳು ಜನರಿಗೆ ಸಿಗುತ್ತಿಲ್ಲ ಎಂದು ಹಲವು ತಹಶೀಲ್ದಾರ ಗಮನಕ್ಕೆ ತಂದರೂ, ಇಲ್ಲಿವರೆಗೆ ಯಾವುದೇ ಪ್ರಯೋಜನೆವಾಗಿಲ್ಲ ಎಂದು ದೂರಿದರು. ವಿಧುವೆ, ವೃದ್ದಾಪ ವೇತನ ಸೇರಿದಂತೆ ಮಾಶಸಾನಗಳ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಸರ್ವರ್‌ ಸಮಸ್ಯೆ ಸೇರಿದಂತೆ ಇತರೆ ಕಾರಣಗಳಿಂದ ಬಹುತೇಕರು ಬೇಸತ್ತಿದ್ದಾರೆ ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ನೂರೆಂಟು ಸಮಸ್ಯೆ ಇದ್ದು, ಅವುಗಳ ಇರ್ಥಾತ್ಯ ಮಾಡಲು ಅಧಿಕಾರಿಗಳು ಕಚೇರಿಗೆ ಬರುವಿಕೆಗಾಗಿ ಅಪರೂಪವಾದರಿಂದ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಿವೆ. ಕ್ಯಾದಿಗೇರಾ ಜಿಪಂ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ ಹಲವು ಸಮಸ್ಯೆಗಳು ತಾಂಡವಾಡುತ್ತಿದ್ದು, ಅರಕೇರಾ ತಾಲೂಕ ಕಚೇರಿಗೆ ಹೋದರು, ನಾಡಕಚೇರಿಯಲ್ಲಿ ನಿಮ್ಮ ಸಮಸ್ಯೆಗಳು ಬಗ್ಗೆಹರಿಸಿಕೊಳುವಂತೆ ಅಧಿಕಾರಿಗಳು ಹೇಳುತ್ತಿರುವುದರಿಂದ ಆಕ್ರೋಶಕ್ಕೆ ಕಾರಣವಾಗುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಕಚೇರಿಯಲ್ಲಿ ಅಧಿಕಾರಿಗಳು ಇದ್ದಾಗ, ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್‌ ಬಾರದೇ ಇರುವುದರಿಂದ ಕಚೇರಿಗೆ ಹೋಗುವಷ್ಟರಲೇ ಅಧಿಕಾರಿಗಳು ಯಾವುದೋ ಕೆಲಸ ಮೇಲೆ ತಾಲೂಕು ಕಚೇರಿಗೆ ಹೋಗುವುದರಿಂದ ಒಂದು ದಿನದ ಸಮಸ್ಯೆಗೆ ವಾರದಗಟ್ಟಲೇ ಅಲೆಯುವಂತಾಗಿದೆ ಎಂದು ಆರೋಪಿಸಿದರು. ಜಿಲ್ಲಾ ಮತ್ತು ತಾಲೂಕ ಆಡಳಿತ ಜನ ಸಾಮಾನ್ಯರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ, ಗ್ರಾಮದಲ್ಲೇ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳು ಆರಂಭಿಸಬೇಕು ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...