ರಾಯಚೂರು | ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ ಕೃಷಿ ಕೂಲಿಕಾರರ ಸಂಘದಿಂದ ಆಗ್ರಹ

Date:

ಅರಣ್ಯ ಮತ್ತು ಗೈರಾಣಿ ಭೂಮಿಯನ್ನು ಸುಮಾರು 50 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬುಡಕಟ್ಟು ಸಮುದಾಯದ ಜನರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕೃಷಿ ಕೂಲಿಕಾರರ ಸಂಘದ ಮುಖಂಡರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಅರಕೇರಾ ತಾಲೂಕಿನ ಗಲಗ ಹಾಗೂ ಸುಣ್ಣದಕಲ್ ಗ್ರಾಮಗಳ ವ್ಯಾಪ್ತಿಯಲ್ಲಿ ಹಗಲು ವೇಷಧಾರಿಗಳು (ಬಂಗಾರ) ಮತ್ತು ನಾಯಕ ಸಮುದಾಯದವರು ಹಲವು ದಶಕಗಳಿಂದ ಅರಣ್ಯ ಹಾಗೂ ಗೈರಾಣಿ ಭೂಮಿಯನ್ನು ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ಅರಣ್ಯ ವಲಯಾಧಿಕಾರಿಗಳು ಬೆಳೆ ಬೆಳೆಯುತ್ತಿರುವ ಜಮೀನುಗಳಲ್ಲಿ ಜೆಸಿಬಿ ಯಂತ್ರಗಳ ಮೂಲಕ ಅಗೆದು ಬೆಳೆಗಳಿಗೆ ಹಾನಿ ಉಂಟುಮಾಡುತ್ತಿದ್ದು, ಸಾಗುವಳಿದಾರರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಸಂಬಂಧಿಸಿದ ಭೂಮಿಗೆ ಹಕ್ಕು ಪಡೆಯಲು ಸಾಗುವಳಿದಾರರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ್ದು, ಅರ್ಜಿಗಳ ಕುರಿತು ಸರ್ಕಾರ ಚರ್ಚೆ ನಡೆಸಿ ಯಾರನ್ನೂ ಒಕ್ಕಲೆಬ್ಬಿಸಬಾರದು ಎಂದು ಆದೇಶ ಹೊರಡಿಸಿದೆ. ಆದರೂ ಅಧಿಕಾರಿಗಳು ಸರ್ಕಾರದ ಆದೇಶಗಳನ್ನು ಪಾಲಿಸದೆ ಬಲವಂತದ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ದೂರಿದರು.

ಆದ್ದರಿಂದ ಸರ್ಕಾರದ ಸುತ್ತೋಲೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಬುಡಕಟ್ಟು ಸಮುದಾಯದ ಸಾಗುವಳಿದಾರರ ಮೇಲಿನ ದೌರ್ಜನ್ಯವನ್ನು ತಕ್ಷಣ ನಿಲ್ಲಿಸಬೇಕು. ಜೆಸಿಬಿ ಮೂಲಕ ಹೊಲಗಳನ್ನು ಅಗೆದು ನಾಶಪಡಿಸುವುದನ್ನು ತಡೆದು, ಸಾಗುವಳಿದಾರರಿಗೆ ರಕ್ಷಣೆ ಒದಗಿಸುವಂತೆ ಅಪರ ಜಿಲ್ಲಾಧಿಕಾರಿಯನ್ನು ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಿತ್ತನೆ ಬೆಳೆಗಳು ಒಣಗಿ ನಷ್ಟ: ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಕರವೇ ಒತ್ತಾಯ

ಈ ವೇಳೆ ಹನುಮಂತ ಗುರಿಕಾರ, ಕರಿಯಪ್ಪ ಅಚ್ಚೊಳ್ಳಿ, ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆ ಪ್ರತಾಪ್ ಸಿಂಹಗೆ ಇದೆಯೇ? ಮೈಲಾಂಡಹಳ್ಳಿ ಮುರಳಿ ತಿರುಗೇಟು

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ...

ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ,...

ಚಿಕ್ಕಮಗಳೂರು | ತಮ್ಮದೇ ಸಮುದಾಯದರಿಂದ ಬಹಿಷ್ಕಾರಗೊಂಡ ಐದು ಕುಟುಂಬ! 

ಗ್ರಾಮಗಳಲ್ಲಿ ಎಲ್ಲಾ ಗ್ರಾಮಸ್ಥರು ಅಣ್ಣ ತಮ್ಮಂದಿರು ಹಾಗೂ ಅಕ್ಕ ತಂಗಿಯರ ಹಾಗಿರುತ್ತಾರೆ....

ಹಾವೇರಿ | ಹೆಣ್ಣು ಬೋಗದ ವಸ್ತುವಲ್ಲ, ಸ್ತ್ರೀ ಶೋಷಣೆ ಕೊನೆಗೊಳ್ಳಲಿ: ಸಂಕಮ್ಮ ಸಂಕಣ್ಣನವರ

"ಮಹಿಳೆಯರ ಮೇಲಿನ ಶೋಷಣೆ, ದೌರ್ಜನ್ಯ, ತಾರತಮ್ಯ ಹಾಗೂ ಲಿಂಗಾಧಾರಿತ ಅಸಮಾನತೆಗಳನ್ನು ಕೊನೆಗೊಳಿಸಿ,...