ರಾಯಚೂರು | ಕೃಷಿ ಇಲಾಖೆ ನೇಮಕಾತಿಯಲ್ಲಿ ನಿಯಮ ಉಲ್ಲಂಘನೆ ಆರೋಪ: ಕೆಇಎ ವಿರುದ್ಧ ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

Date:

ಕೃಷಿ ಇಲಾಖೆ ನೇಮಕಾತಿಯಲ್ಲಿ ಸಿ&ಆರ್ (ವೃಂದ ಮತ್ತು ನೇಮಕಾತಿ) ನಿಯಮಗಳನ್ನು ಉಲ್ಲಂಘಿಸಿ ಬಿಇ ಬಯೋಟೆಕ್ ಹಾಗೂ ಐಸಿಎಆರ್ (ICAR) ಮಾನ್ಯತೆ ಇಲ್ಲದ ಖಾಸಗಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರೋಪಿಸಿ ಕೃಷಿ ವಿದ್ಯಾರ್ಥಿಗಳು ಸೋಮವಾರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕೈಗೊಂಡಿರುವ ಕ್ರಮವನ್ನು ಖಂಡಿಸಿದ ವಿದ್ಯಾರ್ಥಿಗಳು, ಮೂಲ ಸಿ&ಆರ್ ನಿಯಮಗಳನ್ನು ಉಲ್ಲಂಘಿಸಿ ಅರ್ಹತೆಯ ಮಾನದಂಡಗಳಲ್ಲಿ ಬದಲಾವಣೆ ಮಾಡಿರುವುದು ಕಾನೂನುಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಪ್ರತಿಭಟನಾಕಾರರು, ಕೃಷಿ ಪದವೀಧರರ ಹಕ್ಕುಗಳನ್ನು ಕಡೆಗಣಿಸಲಾಗುತ್ತಿದ್ದು, ಅವೈಜ್ಞಾನಿಕ ‘ದೇಸಿ ಪ್ರೋಗ್ರಾಂ’ ಜಾರಿಯಿಂದ ರೈತರು ಕೂಡ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಆರೋಪಿಸಿದರು. ಕೃಷಿ ಇಲಾಖೆಯ ನೇಮಕಾತಿಯಲ್ಲಿ ಕೃಷಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ, “ನಿಯಮಬಾಹಿರ ನೇಮಕಾತಿ ರದ್ದಾಗಬೇಕು”, “ಕೃಷಿ ವಿದ್ಯಾರ್ಥಿಗಳ ಭವಿಷ್ಯ ಕಸಿದುಕೊಳ್ಳುತ್ತಿರುವ ಕೆಇಎಗೆ ಧಿಕ್ಕಾರ” ಎಂಬ ಘೋಷಣೆಗಳನ್ನು ಕೂಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ನೂರಾರು ವಿದ್ಯಾರ್ಥಿಗಳು ಬ್ಯಾನರ್‌ಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ವಿದ್ಯಾರ್ಥಿ ಮುಖಂಡರು, 2025ರ ಏಪ್ರಿಲ್ 10ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ, ಹೊಸ ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಿರುವ ಅರ್ಹತಾ ಮಾನದಂಡಗಳನ್ನು ನೇಮಕಾತಿ ಪ್ರಕ್ರಿಯೆ ಮಧ್ಯದಲ್ಲಿ ಬದಲಾಯಿಸಲು ಅವಕಾಶವಿಲ್ಲ ಎಂದು ತಿಳಿಸಿದರು. ಆದರೂ ಕೃಷಿ ಇಲಾಖೆ ಹಾಗೂ ಕೆಇಎ ಕೊನೆ ಕ್ಷಣದಲ್ಲಿ ಐಸಿಎಆರ್ ಮಾನ್ಯತೆ ಇಲ್ಲದ ಖಾಸಗಿ ‘ರೈಟೆಕ್’ (Rai Technology University) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಕಲ್ಪಿಸಿರುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.

ಕೃಷಿ ಇಲಾಖೆಯ ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಬಿ.ಇ. ಬಯೋಟೆಕ್ ಪದವೀಧರರಿಗೆ ಅವಕಾಶ ಕಲ್ಪಿಸಿರುವ ಕ್ರಮವನ್ನು ಕೃಷಿ ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸಿದ್ದಾರೆ. ಕೃಷಿ ಶಿಕ್ಷಣದ ಹಿನ್ನೆಲೆ ಇಲ್ಲದ ಅಭ್ಯರ್ಥಿಗಳಿಗೆ ಕೃಷಿ ಇಲಾಖೆಯ ತಾಂತ್ರಿಕ ಹುದ್ದೆಗಳಲ್ಲಿ ಅವಕಾಶ ನೀಡುವುದು ಇಲಾಖೆಯ ಉದ್ದೇಶ ಹಾಗೂ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕೃಷಿ ಕ್ಷೇತ್ರದ ತಾಂತ್ರಿಕ ಜ್ಞಾನ, ಬೆಳೆ ನಿರ್ವಹಣೆ, ಮಣ್ಣಿನ ಆರೋಗ್ಯ, ಕೀಟ ಹಾಗೂ ರೋಗ ನಿಯಂತ್ರಣ ಸೇರಿದಂತೆ ಕೃಷಿ ಸಂಬಂಧಿತ ವಿಷಯಗಳಲ್ಲಿ ಪರಿಣತಿ ಹೊಂದಿರುವ ಕೃಷಿ ಪದವೀಧರರಿಗೆ ಆದ್ಯತೆ ನೀಡಬೇಕಾಗಿದ್ದು, ಬಿ.ಇ. ಬಯೋಟೆಕ್ ಪದವೀಧರರನ್ನು ಈ ಹುದ್ದೆಗಳಿಗೆ ಪರಿಗಣಿಸುವ ನಿರ್ಧಾರವನ್ನು ಸರ್ಕಾರ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಆದ್ದರಿಂದ, ಕೃಷಿ ಇಲಾಖೆಯ AO ಮತ್ತು AAO ಹುದ್ದೆಗಳ ನೇಮಕಾತಿಯಿಂದ ಬಿ.ಇ. ಬಯೋಟೆಕ್ ಪದವೀಧರರಿಗೆ ನೀಡಿರುವ ಅವಕಾಶವನ್ನು ತಕ್ಷಣವೇ ಹಿಂಪಡೆದು, ಮೂಲ ಸಿ&ಆರ್ (ವೃಂದ ಮತ್ತು ನೇಮಕಾತಿ) ನಿಯಮಗಳ ಅನ್ವಯ ಕೃಷಿ ಪದವೀಧರರಿಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಾಜಿ ಶಾಸಕ ಸೈಯದ್ ಯಾಸೀನ್ ಅಂತಿಮ ದರ್ಶನಕ್ಕೆ ಈದ್ಗಾ ಮೈದಾನದಲ್ಲಿ ವ್ಯವಸ್ಥೆ

ಸಂವಿಧಾನದ 309ನೇ ವಿಧಿಯಡಿ ರೂಪಿಸಲಾದ ಮೂಲ ಸಿ&ಆರ್ ನಿಯಮಗಳನ್ನು ಯಾವುದೇ ಸಾಮಾನ್ಯ ಸರ್ಕಾರಿ ಆದೇಶಗಳು ಮೀರುವಂತಿಲ್ಲ. ಹೀಗಾಗಿ ಕೃಷಿ ಇಲಾಖೆ ಹಾಗೂ ಕೆಇಎ ಕೈಗೊಂಡಿರುವ ಕ್ರಮದಿಂದ ಸರ್ಕಾರಿ ಕೃಷಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ರೈಟೆಕ್ ವಿಶ್ವವಿದ್ಯಾಲಯಕ್ಕೆ ನೀಡಿರುವ ಅವಕಾಶವನ್ನು ತಕ್ಷಣವೇ ರದ್ದುಪಡಿಸಿ ಮೂಲ ನಿಯಮಗಳ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...

ರಾಯಚೂರು | ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವಕ್ಕೆ ಎನ್‌.ಎಸ್.ಬೋಸರಾಜು ಶುಭ ಹಾರೈಕೆ

ನಾಳೆ ನ. 29ರಂದು ನಡೆಯಲಿರುವ ರಾಯಚೂರು ರಿಪೋರ್ಟಸ ಗಿಲ್ಡ್‌ನ 25ನೇ ವರ್ಷದ...