ರಾಯಚೂರು | ಗಣೇಶ ಚತುರ್ಥಿ ಹಿನ್ನೆಲೆ: 23 ಜನರ ವಿರುದ್ಧ ಗಡಿಪಾರಿಗೆ ಕ್ರಮ: ಎಸ್‌ಪಿ ಅರುಣಾಂಗ್ಷು ಗಿರಿ

Date:

ಸೆ.14ರಂದು ನಡೆಯಲಿರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಯಚೂರು ಜಿಲ್ಲಾ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು 23 ಜನರನ್ನು ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್‌ಪಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.

- Advertisement -

ಜಿಲ್ಲೆಯಲ್ಲಿ ಗುರುತಿಸಲಾಗಿರುವ 1,557 ರೌಡಿ ಆಸಾಮಿಗಳ ಪೈಕಿ 1,454 ಮಂದಿಯ ವಿರುದ್ಧ ಮುಂಜಾಗ್ರತಾ ಕ್ರಮ ಜರುಗಿಸಲಾಗಿದೆ. ಈ ಪೈಕಿ 1,124 ಮಂದಿಯಿಂದ ತಾಲೂಕು ದಂಡಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಮುಚ್ಚಳಿಕೆ ಪತ್ರ ಪಡೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಜಿಲ್ಲೆಯಲ್ಲಿ ಒಟ್ಟು 2,570 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದ್ದು, ಎಲ್ಲ ಗಣೇಶ ಮಂಡಳಿಗಳಿಂದ ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ಳಲಾಗಿದೆ. ರಾಯಚೂರು ನಗರ ಸೇರಿದಂತೆ ಎಲ್ಲಾ ತಾಲೂಕು ಹಾಗೂ ಗ್ರಾಮಗಳಲ್ಲಿ ವಿವಿಧ ಸಮುದಾಯಗಳ ಮುಖಂಡರು ಮತ್ತು ಅಧಿಕಾರಿಗಳೊಂದಿಗೆ ಶಾಂತಿ ಸಭೆಗಳು ನಡೆಸಲಾಗಿದೆ.

ಹಬ್ಬದ ಬಂದೋಬಸ್ತ್ ವೇಳೆ ಹೆಚ್ಚುವರಿ ಎಸ್‌ಪಿ, 4 ಡಿಎಸ್‌ಪಿಗಳು, 31 ಪಿಐ/ಸಿಪಿಐಗಳು, 122 ಎಎಸ್‌ಐಗಳು, 630 ಪೊಲೀಸ್‌ ಸಿಬ್ಬಂದಿ, 500 ಗೃಹರಕ್ಷಕ ದಳದ ಸಿಬ್ಬಂದಿ, 10 ಸಶಸ್ತ್ರ ಮೀಸಲು ಪಡೆ ತುಕಡಿಗಳು, 6 ಕೆಎಸ್‌ಆರ್‌ಪಿ ತುಕಡಿಗಳು ಹಾಗೂ ಎಎಸ್‌ಸಿ ತಂಡವನ್ನು ನಿಯೋಜಿಸಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವೈದ್ಯಕೀಯ ವಿದ್ಯಾರ್ಥಿಗಳು, ಯುವಕ-ಯುವತಿಯರನ್ನು ಬ್ಲ್ಯಾಕ್‌ಮೇಲ್ ಆರೋಪ: ಮೂವರು ಬಂಧನ

ಜಿಲ್ಲೆಯ ಜನರು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಶಾಂತಿ, ಸೌಹಾರ್ದ ಮತ್ತು ಕಾನೂನು ಪಾಲನೆಯೊಂದಿಗೆ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಸರಕಾರದ ತಪ್ಪು ನಿರ್ಧಾರಗಳನ್ನು ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ : ಅಣ್ಣಾಮಲೈ

ಸರಕಾರದ ಯೋಜನೆಗಳು ಅಥವಾ ನಿರ್ಧಾರಗಳಿಂದ ಜನಸಾಮಾನ್ಯರಿಗೆ ತೊಂದರೆಯಾದರೆ, ಪಕ್ಷಭೇದ ಮರೆತು ಅದನ್ನು...

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...