ರಾಯಚೂರು | ಕೆಕೆಆರ್‌ಡಿಬಿ ಅನುದಾನ ದುರುಪಯೋಗ ಅಜಯಸಿಂಗ್ ರಾಜೀನಾಮೆ ನೀಡಲಿ; ರಾಘವೇಂದ್ರ ಕುಷ್ಟಗಿ

Date:

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದ ರಾಯಚೂರು ಭಾಗದ ಅಭಿವೃದ್ದಿಗೆ ಸಚಿವರು, ಶಾಸಕರುಗಳು ನಿರ್ಲಕ್ಷ್ಯ ವಹಿಸಿ ಅಭಿವೃದ್ದಿ ಕನಸಿಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಕೂಡಲೇ ನೈತಿಕ ಹೊಣೆಹೊತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ ಸಿಂಗ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್ ಇವರನ್ನು ಸೇವೆಯಿಂದ ಅಮಾನತ್ ಮಾಡಿ ವಿಚಾರಣೆಗೆ ಒಳಪಡಿಸಬೇಕೆಂದು ಹೈದ್ರಾಬಾದ ಕರ್ನಾಟಕ ಜನಾಂದೋಲನ ಕೇಂದ್ರ ಸಂಸ್ಥಾಪಕ ರಾಘವೇಂದ್ರ ಕುಷ್ಟಗಿ ಆಗ್ರಹಿಸಿದರು.

- Advertisement -

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಈ ಭಾಗದ ಹಿಂದುಳುವಿಕೆ ನಿವಾರಿಸಲೆಂದು 371(ಜೆ) ಕಾಯ್ದೆ ರೂಪಿಸಲಾಗಿದೆ. ಆದರೆ 2025-26 ನೇ ಸಾಲಿನಲ್ಲಿ 5 ಸಾವಿರ ಕೋಟಿ ರೂ ಅನುದಾನದಲ್ಲಿ ಮಂಡಳಿ 862.93 ಕೋಟಿ ರೂ ಮಾತ್ರ ಕ್ರಿಯಾಯೋಜನೆಗೆ ಅನುಮೋದನೆ ಪಡೆದಿದೆ. ಲಭ್ಯವಿರುವ ಅನುದಾನ ಬಳಕೆ ಮಾಡಿಕೊಳ್ಳದೇ ನಿರ್ಲಕ್ಷ್ಯ ಎದ್ದುಕಾಣುತ್ತಲಿದೆ. ಮಂಡಳಿ ಅಧ್ಯಕ್ಷರಾಗಿರುವ ಅಜಯಸಿಂಗ್ ರಾಜೀನಾಮೆ ನೀಡಬೇಕು. ಮಂಡಳಿಗೆ ಪ್ರತ್ಯೇಕ ಕಾರ್ಯದರ್ಶಿಯನ್ನು ನೇಮಿಸಲಾಗಿದೆ. ಆದರೂ ಸಕಾಲದಲ್ಲಿ ಕ್ರಿಯಾಯೋಜನೆ ರೂಪಿಸಿ ಅನುದಾನ ಬಳಕೆ ಮಾಡುವಲ್ಲಿ ನಲಿನ್ ಅತುಲ್ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಯೋಜನಾ ಇಲಾಖೆ ಕಾರ್ಯದರ್ಶಿಗಳು 2026 ಫೆ.3 ರಂದು ಕೆಕೆಆರ್‌ಡಿಬಿ ಕಾರ್ಯದರ್ಶಿಗಳಿಗೆ ಪತ್ರ ಬರೆದು 4137 ಕೋಟಿ ಕ್ರಿಯಾಯೋಜನೆ ಸಲ್ಲಿಸದೇ ಇರುವ ಕುರಿತು ಪತ್ರ ಬರೆದರೂ ಎಚ್ಚರಗೊಂಡಿಲ್ಲ. ಮಂಡಳಿಯಿಂದ ಅಭಿವೃದ್ದಿ ನಿರೀಕ್ಷೆ ಹುಸಿಯಾಗಿದೆ. ಆಯಾ ಆರ್ಥಿಕ ಸಾಲಿನಲ್ಲಿ ಅನುದಾನ ಬಳಕೆ ಮಾಡದೇ ಸಾವಿರಾರು ಕೊಟಿ ಹಣ ಬಳಕೆಯಾಗದೇ ಹೋಗಿರುವಾಗಲೇ ಖರ್ಚಾಗಿರುವ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ಗುಣಮಟ್ಟ ತಪಾಸಣೆಗೆ ಮೂರನೇ ತಂಡ ತಪಾಸಣೆಗೆ ಸಂಸ್ಥೆಯೊಂದನ್ನು ನೇಮಿಸಲಾಗಿದೆ. ಆದರೂ ಸರಿ ಸುಮಾರು 10 ಸಾವಿರ ಕೋಟಿ ಅನುದಾನ ಕಳಪೆ ಕಾಮಗಾರಿಗಳಿಂದ ಹಾಳಾಗಿದ್ದು ಹಣದ ದುರ್ಬಳಕೆಯಾಗಿದೆ ಎಂದರು.

ಈ ಭಾಗದ ಸಚಿವರುಗಳು 40 ಜನ ಶಾಸಕರುಗಳು ಈ ಕುರಿತು ಬಾಯಿಬಿಡದೇ ಮೌನವಾಗಿದ್ದಾರೆ. 371(ಜೆ) ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿರುವ ಪ್ರಿಯಾಂಕ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ್, ಎನ್.ಎಸ್.ಬೋಸರಾಜ, ತಂಗಡಗಿ ಸೇರಿದಂತೆ ಸಚಿವರುಗಳು, ಕೆಕೆಆರ್‌ಡಿಬಿ ಮಂಡಳಿ ಸದಸ್ಯರುಗಳು ಪ್ರಶ್ನಿಸದೇ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಆಡಳಿತ ಶಾಸಕರು, ಸಚಿವರೊಂದಿಗೆ ಬಿಜೆಪಿ, ಜೆಡಿಎಸ್ ಶಾಸಕರುಗಳು ಸಹ ಮೌನವಾಗಿರುವದು ವಿಪರ್ಯಾಸ ಎಂದರು.

ರಾಜಕೀಯ ಪಕ್ಷಗಳ ಬದ್ದತೆಯ ಕೊರತೆಯಿಂದ ಅಭಿವೃದ್ದಿಗೆ ಹಿನ್ನಡೆಯಾಗುತ್ತಿರುವುದು ವಿರೋಧ ಬಲಿಷ್ಟ ಹೋರಾಟ ರೂಪಿಸಲು ಮೇ.24 ರಂದು ರಾಯಚೂರಿನಲ್ಲಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಕಲ್ಯಾಣ ಕರ್ನಾಟಕ ಎಲ್ಲಾ ಜಿಲ್ಲೆಗಳ ಪ್ರಮುಖ ಹೋರಾಟಗಾರರು, ಸಂಘಟನೆಗಳೊಂದಿಗೆ ಒಗ್ಗೂಡಿ ಹೋರಾಟ ರೂಪಿಸಲಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಿಥಿಲಗೊಂಡ ತುಂಗಭದ್ರಾ ಎಡದಂಡೆ ಕಾಲುವೆಗಳು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ; ಚಾಮರಸ್ ಮಾಲಿಪಾಟೀಲ

ಈ ಸಂದರ್ಬದಲ್ಲಿ ಜಾನವೆಸ್ಲಿ, ಖಾಜಾ ಅಸ್ಲಂ, ಬಿ.ಬಸವರಾಜ, ಈರಣ್ಣ ಭಂಡಾರಿ, ಭೀಮರಾಯ ಜೇರದಬಂಡಿ, ಆರ್.ಬಸವರಾಜ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...