ರಾಯಚೂರು | ರಾಜ್ಯದ 20 ಜಿಲ್ಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತಾಯಿಸಿ ಅಹೋರಾತ್ರಿ ಧರಣಿ

Date:

ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕು ಹಾಗೂ ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಗುಣಾತ್ಮಕ ಶಿಕ್ಷಣ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಏ.14ರಂದು ರಾಜ್ಯದ 20 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಸಂಚಾಲಕಿ ವಿದ್ಯಾ ಪಾಟೀಲ್ ಹೇಳಿದರು.

- Advertisement -

ಮಾದ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಏ.14ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಅಂದು ರಾತ್ರಿಯಿಂದ ಏ.15ರ ಬೆಳಿಗ್ಗೆ ವರೆಗೂ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಂಘದ ಮೋಕ್ಷಮ್ಮ ಮಾತನಾಡಿ, ʼರಾಜ್ಯದಲ್ಲಿ 62,420ಕ್ಕೂ ಅಧಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕೂಡಲೇ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭತಿ ಮಾಡಬೇಕು. ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ 1ರಿಂದ 5ನೇ ತರಗತಿ ಶಾಲೆಗಳು ನೆರೆಹೊರೆ ಶಾಲೆ ಇರಬೇಕು. 6ರಿಂದ 8ನೇ ತರಗತಿ 3ಕಿ.ಮೀ ಒಳಗಿರಬೇಕು ಎಂಬ ನಿಯಮವಿದ್ದು, ಆದರೆ ಸರ್ಕಾರ ಈ ನಿಯಮವನ್ನು ಉಲ್ಲಂಘಿಸುತ್ತಿದೆ. ಕಡ್ಡಾಯವಾಗಿ ನಿಯಮವನ್ನು ಪಾಲಿಸಬೇಕುʼ ಎಂದರು.

‘ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ಗ್ರಂಥಾಲಯ ಸೇರಿ ಇತ್ಯಾದಿ ಸೌಲಭ್ಯಗಳನ್ನು ಒದಗಿಸಬೇಕು. ಪ್ರತಿಯೊಂದು ಶಾಲೆಗೂ ಓರ್ವ ಪರಿಚಾರಕರನ್ನು ನೇಮಿಸಬೇಕು. ಸರ್ಕಾರ ಕೆಪಿಎಸ್, ಮ್ಯಾಗ್ನೆಟ್ ಶಾಲೆಗಳನ್ನು ತಕ್ಷಣ ನಿಲ್ಲಿಸಬೇಕುʼ ಎಂದು ಆಗ್ರಹಿಸಿದರು.

ಸೈಯದ್ ಹಪೀಜುಲ್ಲಾ ಮಾತನಾಡಿ, ʼಸರ್ಕಾರ ಇಷ್ಟು ದಿನ ನಲಿ-ಕಲಿ ತರಗತಿಗಳನ್ನು ನಡೆಸಿ, ಇದೀಗ ತೆಗೆಯಲು ಹೊರಟಿದೆ. ಮುಂದೆಯೂ ಮ್ಯಾಗ್ನೆಟ್ ಶಾಲೆ ಮಾಡಿ ತೆಗೆಯುತ್ತದೆ. ಇದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಹಳ್ಳಿಗಳಲ್ಲಿ ಶಾಲೆಗಳು ಮುಚ್ಚಿ ಹೋಗುತ್ತವೆ. ಸರ್ಕಾರ ಕೂಡಲೇ ಆರ್‌ಟಿಇ ಕಾಯ್ದೆಯಡಿಯಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಪತ್ರಕರ್ತರ ಲೇಖನಿ ಸತ್ಯದ ಪರವಾಗಿರಲಿ : ಸಭಾಧ್ಯಕ್ಷ ಯು.ಟಿ.ಖಾದರ್

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ಶಿವರಾಮ, ವಿರೂಪಮ್ಮ, ಮಾರೆಮ್ಮ ಸೇರಿ ಅನೇಕರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...

ಕೊಪ್ಪಳ | ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಬೆಂಕಿ: ಕ್ರೀಡಾ ಸಾಮಗ್ರಿಗಳು ಭಸ್ಮ

ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಮುಂಜಾನೆ...

ರಾಯಚೂರು | ಜಾಲಹಳ್ಳಿ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರಗಳಿಗೆ ಎಸ್‌ಸಿ ಮೀಸಲಾತಿಗೆ ಆಗ್ರಹ

ಜಾಲಹಳ್ಳಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ...