ರಾಯಚೂರು | ದಸರಾ ವೇಳೆ ದಲಿತ ಸಚಿವರನ್ನು ತಡೆದ ಆರೋಪ: ಮೈಸೂರು ಎಸ್‌ಪಿ ವಿರುದ್ಧ ಕ್ರಮಕ್ಕೆ ಹನುಮಂತಪ್ಪ ಮನ್ನಾಪುರಿ ಆಗ್ರಹ

Date:

ಮೈಸೂರಿನ ದಸರಾ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತೆರಳುತ್ತಿದ್ದ ಮೂವರು ದಲಿತ ಸಚಿವರನ್ನು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ತಡೆದಿದ್ದಾರೆ ಎನ್ನಲಾದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೈಸೂರು ಎಸ್‌ಪಿ ರಿಂಷತ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಂಆರ್‌ಎಚ್‌ಎಸ್ ಸಂಘಟನೆಯ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪುರಿ ಆಗ್ರಹಿಸಿದ್ದಾರೆ.

- Advertisement -

ಪ್ರತಿ ವರ್ಷದಂತೆ ಈ ವರ್ಷವೂ ದಸರಾ ಮಹೋತ್ಸವದ ಅಂಗವಾಗಿ ಗಜರಾಜನ ಮೇಲೆ ಅಂಬಾರಿ ಹೊರಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಸಚಿವರು ತೆರಳುತ್ತಿದ್ದರು. ಈ ವೇಳೆ ಮೂವರು ದಲಿತ ಸಚಿವರನ್ನು ತಡೆದಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಸಚಿವರಿಗೇ ಇಂತಹ ಪರಿಸ್ಥಿತಿ ಎದುರಾದರೆ ಸಾಮಾನ್ಯ ಜನರ ಗತಿ ಏನು? ಸಚಿವರು ಎಂಬುದು ಪೊಲೀಸ್ ಅಧಿಕಾರಿಗಳಿಗೆ ತಿಳಿದಿರಲಿಲ್ಲವೇ? ಮುಖ್ಯಮಂತ್ರಿಗಳೊಂದಿಗೆ ತೆರಳುತ್ತಿದ್ದ ಸಚಿವರನ್ನು ತಡೆದಿರುವುದರ ಹಿಂದಿನ ಉದ್ದೇಶವೇನು? ಇಂತಹ ಘಟನೆಗಳು ಸಾರ್ವಜನಿಕ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Advertisements

ರಾಜ್ಯದಲ್ಲಿ ಜಾತೀಯತೆ ಇನ್ನೂ ಜೀವಂತವಾಗಿದೆ ಎಂಬ ಭಾವನೆ ಮೂಡಲು ಇಂತಹ ಘಟನೆಗಳು ಕಾರಣವಾಗುತ್ತವೆ. ಸಾರ್ವಜನಿಕ ಜೀವನದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಬೇಕಾದ ಸಂದರ್ಭದಲ್ಲಿ, ಜನಪ್ರತಿನಿಧಿಗಳೊಂದಿಗೆ ನಡೆದುಕೊಳ್ಳುವ ರೀತಿಯೂ ಪ್ರಶ್ನಾರ್ಹವಾಗಬಾರದು ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ಆದ್ದರಿಂದ, ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಮೈಸೂರು ಎಸ್‌ಪಿ ರಿಂಷತ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಎಂಆರ್‌ಎಚ್‌ಎಸ್ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪುರಿ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಚಿ–ಬಾಗಲಕೋಟೆ ರೈಲು ಮಾರ್ಗ ಕಾಮಗಾರಿ ವಿಳಂಬ: ಶೀಘ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯಲ್ಲಿ ರೈಲ್ವೆ ಇಲಾಖೆ ವಿಳಂಬ ಮಾಡುತ್ತಿರುವುದು ಹಾಗೂ...

ಹಾವೇರಿ | ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಬೋಗಸ್ ಮತದಾನ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ

"​ಇತ್ತೀಚೆಗೆ ಜರುಗಿದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾವೇರಿ ನಗರದ ಮತಗಟ್ಟೆ...

ಬಾಗಲಕೋಟೆ | ಎರಡು ಎಕರೆ ಜಮೀನಿಗಾಗಿ ಅತ್ತಿಗೆ ಮೇಲೆ ಬುಲೆರೊ ಹಾಯಿಸಿ ಕೊಲೆ ಯತ್ನ!

ಬೆಟ್ಟದಷ್ಟು ಆಸ್ತಿ ಇದ್ದರೂ ಎರಡು ಎಕರೆ ಜಮೀನಿನ ವಿವಾದಕ್ಕೆ ರಕ್ತಸಂಬಂಧವನ್ನೇ ಮರೆತು...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...