ರಾಯಚೂರು | ಮನರೇಗಾ ಯೋಜನೆಯಲ್ಲಿ ನಿಯಮ ಉಲ್ಲಂಘನೆ, ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಗ್ರಾಮ ಪಂಚಾಯಿತಿಯಲ್ಲಿ ಸಂಪೂರ್ಣ ಅವ್ಯವಸ್ಥೆ ಹಾಗೂ ನಿಯಮ ಉಲ್ಲಂಘನೆಗಳ ಆಗರವಾಗಿದೆ ಎಂದು ಭೀಮಸೇನೆ ಕರ್ನಾಟಕ ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಮಾನ್ವಿ ತಾಲ್ಲೂಕು ಚಿಕ್ಕ ಕೊಟ್ನೇಕಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಗೇಣಿ ಅವರ ಆಡಳಿತಾವಧಿಯಲ್ಲಿ ಕಾನೂನುಗಳನ್ನು ಸಂಪೂರ್ಣವಾಗಿ ಕಡೆಗಣಿಸಿ, ಉದ್ಯೋಗವನ್ನು ನಂಬಿಕೊಂಡಿರುವ ಬಡ ಕಾರ್ಮಿಕರ ಕಾನೂನುಬದ್ಧ ಹಕ್ಕುಗಳಿಗೆ ಧಕ್ಕೆ ತರಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮನರೇಗಾ ಕಾಯ್ದೆಯ ಪ್ರಕಾರ ಕಾಮಗಾರಿಗಳನ್ನು ಕೈಗೊಳ್ಳಲು ಕಡ್ಡಾಯವಾಗಿರುವ ವಾರ್ಷಿಕ ಕ್ರಿಯಾ ಯೋಜನೆಯನ್ನು ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳನ್ನು ನಡೆಸದೆ ಏಕಪಕ್ಷೀಯವಾಗಿ ಸಿದ್ಧಪಡಿಸಲಾಗುತ್ತಿದೆ ಹಾಗೂ ಕಾಮಗಾರಿಗಳ ಗುಣಮಟ್ಟ ಹಾಗೂ ಪಾರದರ್ಶಕತೆಯ ಮೇಲ್ವಿಚಾರಣೆಗೆ ರಚಿಸಬೇಕಾದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನೂ ನಿಯಮಾನುಸಾರ ರಚನೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಇನ್ನೂ ಸಮಿತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ನೀಡದೇ ಸಾಮಾಜಿಕ ನ್ಯಾಯದ ತತ್ವಗಳಿಗೆ ಧಕ್ಕೆ ತಂದಿದ್ದಾರೆ. ಉದ್ಯೋಗ ಮಿತ್ರರಿಗೆ ಅಗತ್ಯ ತರಬೇತಿ ನೀಡದ ಕಾರಣ ಯೋಜನೆಯ ವಿವಿಧ ಹಂತಗಳಲ್ಲಿ ಗೊಂದಲಗಳು ಉಂಟಾಗುತ್ತಿವೆ. ಬಿಸಿಲಿನಲ್ಲಿ ದುಡಿಯುವ ಕಾರ್ಮಿಕರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಪ್ರಾಥಮಿಕ ಚಿಕಿತ್ಸೆಯಂತಹ ಮೂಲಭೂತ ಸೌಲಭ್ಯಗಳನ್ನೂ ಒದಗಿಸಿಲ್ಲ ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಲಿಂಗಸುಗೂರು | ಎನ್‌ಆರ್‌ಸಿ, ಸಿಎಎ ಮುಂದುವರಿದ ಭಾಗವೇ ಎಸ್‌ಐಆರ್; ಶರಣುಕುಮಾರ ಮುದ್ದಮ್ಮಗುಡ್ಡಿ

ಇದಲ್ಲದೆ, ಕಿರಿಯ ಅಭಿಯಂತರರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ತಾಂತ್ರಿಕ ಪರಿಶೀಲನೆ ನಡೆಸದೇ, ಕೇವಲ ಕಚೇರಿಯಲ್ಲೇ ಕುಳಿತು ಹಣ ಪಾವತಿ ಬಿಲ್‌ಗಳನ್ನು ಸಿದ್ಧಪಡಿಸಿದ್ದಾರೆ. ಈ ಎಲ್ಲ ಅಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...