ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

Date:

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ ಕಾರಣಕ್ಕೆ ಇಬ್ಬರ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಐವರ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಗ್ರಾಮದ ಸಂಗಪ್ಪ ಎಂಬುವವರು ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಯಮನೂರು, ರಮೇಶ, ತಿಮ್ಮಣ್ಣ ಬಸವರಾಜ ಹಾಗೂ ರವಿ ಎಂಬವರು ಅವರನ್ನು ಜಾತಿ ಹೆಸರಿನಿಂದ ನಿಂದಿಸಿ, ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಘಟನೆಯನ್ನು ಕಂಡು ಗಲಾಟೆಯನ್ನು ಬಿಡಿಸಲು ಮುಂದಾದ ಸಂಗಪ್ಪ ಅವರ ಅಣ್ಣ ಗದ್ದೆಪ್ಪ ಅವರ ಮೇಲೂ ಆರೋಪಿಗಳು ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಜಾತಿ ನಿಂದನೆ, ಹಲ್ಲೆ ಸೇರಿದಂತೆ ವಿವಿಧ ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಗ್ರಾಮದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಘಟನೆ ಕುರಿತು ಪೊಲೀಸರು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಮುಖಂಡ ಮೋಹನ್ ಗೊಸ್ಲೇ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...