ರಾಯಚೂರು | ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಂಬೇಡ್ಕರ್‌ಗೆ ಅವಮಾನ; ಪೌರಾಯುಕ್ತರ ಅಮಾನತಿಗೆ ಆಗ್ರಹ

Date:

ಸ್ವಾತಂತ್ರ‍್ಯ ದಿನದಂದು ನಗರಸಭೆ ಕಚೇರಿ ಆವರಣದಲ್ಲಿ ಧ್ವಜಾರೋಹಣದ ವೇಳೆ ಅಂಬೇಡ್ಕರ್ ಭಾವಚಿತ್ರ ಇಡದೇ ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯಸ್ವಾಮಿ ಅವಮಾನ ಮಾಡಿದ್ದಾರೆ. ಅವರನ್ನು ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.

ರಾಯಚೂರು ಜಿಲ್ಲಾಧಿಕಾರಿಕಚೇರಿ ಎದುರು ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. “ಸ್ವಾತಂತ್ರ‍್ಯ ದಿನಾಚರಣೆ ದಿನ ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಟ್ಟು ಪೂಜಿಸಬೇಕೆಂದು ಹೈಕೋರ್ಟ್ ಆದೇಶವಿದೆ. ದೇಶಾದ್ಯಂತ ಎಲ್ಲ ಕಡೆ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜಿಸುತ್ತಾರೆ. ಆದರೆ, ನಗರಸಭೆಯಲ್ಲಿ ಮಾತ್ರ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಪೌರಾಯುಕ್ತ ಗುರುಸಿದ್ದಯ್ಯಸ್ವಾಮಿ ಅವರು ಅವಮಾನ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಗರಸಭೆಯಲ್ಲಿ ಕೇವಲ ಮಹಾತ್ಮ ಗಾಂಧಿ ಅವರ ಭಾವಚಿತ್ರ ಇಟ್ಟು ಧ್ವಜಾರೋಹಣ ಮಾಡಿದ್ದು, ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿದ್ದಾರೆ. ಪೌರಾಯುಕ್ತ ಗುರುಸಿದ್ದಯ್ಯಸ್ವಾಮಿ ಅವರನ್ನು ಅಮಾನತುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಮುಖಂಡ ಎಸ್. ಮಾರೆಪ್ಪ ವಕೀಲ, ರವೀಂದ್ರನಾಥ ಪಟ್ಟಿ, ಜೆ.ಬಿ. ರಾಜು, ಹೇಮರಾಜ ಅಸ್ಕಿಹಾಳ, ಎಂ.ಆರ್.ಬೇರಿ, ಜನಾ೯ಧನ ಹಳ್ಳಿಬೆಂಚಿ, ಎಸ್. ರಾಜು, ಅನಿಲ್‌ಕುಮಾರ್, ರಾಘವೇಂದ್ರ ಬೋರಡ್ಡಿ, ರಾಜುಪಟ್ಟಿ, ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಸ್‌-ಬೈಕ್‌ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ಸಾವು

ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್‌ ಮಧ್ಯೆ ಸಂಭವಿಸಿದ ಭೀಕರ ರಸ್ತೆ...

ರಾಯಚೂರು | ಪಶ್ಚಿಮ ಬಂಗಾಳದ ವರದಿಗಾರ ಸಂತುಪನ್ ಬಂಧನಕ್ಕೆ ಖಂಡನೆ

ಪಶ್ಚಿಮ ಬಂಗಾಳದ ಸಂದೇಶ ಕಾಲಿಯಲ್ಲಿ ರಿಪಬ್ಲಿಕ್ ಟಿವಿ ನ್ಯೂಸ್ ಚಾನಲ್‌ನ ವರದಿಗಾರ...

ರಾಯಚೂರು | ಬಾಲ್ಯ ವಿವಾಹ ಹೆಚ್ಚಳ; ಸುಮೊಟೊ ಪ್ರಕರಣ ದಾಖಲಿಸಲು ಡಿಸಿ ಸೂಚನೆ

ರಾಯಚೂರು ಜಿಲ್ಲೆಯಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ನಡೆಯುತ್ತಿದ್ದು, ತಾಲೂಕು ಮತ್ತ ಗ್ರಾಮ...

ರಾಯಚೂರು | ವಿಶೇಷಚೇತನ ಅನುದಾನ ಪೂರ್ಣ ಬಳಕೆಯಲ್ಲಿ ವಿಫಲ: ಸುರೇಶ ಭಂಡಾರಿ ಮದುಗಲ್

ವಿಶೇಷಚೇತನರ ಕಲ್ಯಾಣಕ್ಕಾಗಿ ರೂಪಿಸಿರುವ ಕಾಯ್ದೆ ಕಾನೂನುಗಳನ್ನು ಜಿಲ್ಲಾಡಳಿತ ಉಲ್ಲಂಘಿಸುತ್ತಿದೆ. ವಿಶೇಷಚೇತನರ ಅನುದಾನ...