ಪಟ್ಟಣದಲ್ಲಿ ತೀವ್ರವಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಆಗ್ರಹಿಸಿ ಮುದಗಲ್ ತಾಲ್ಲೂಕು ರಚನೆ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಪುವಿತಾ ಎಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸಮರ್ಪಕವಾಗಿ ನೀರು ಪೂರೈಕೆಯಾಗದೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬೇಸಿಗೆಯ ದಿನಗಳಲ್ಲಿ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದ್ದು, ಕುಡಿಯುವ ನೀರಿಗಾಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಪಟ್ಟಣದ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಸದಸ್ಯರು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | 761 ಅಂಗನವಾಡಿಗಳಿಗಿಲ್ಲ ಸ್ವಂತ ಸೂರು: ಸೋರುವ ಕೊಠಡಿಗಳಲ್ಲೇ ಮಕ್ಕಳ ಊಟ, ಪಾಠ
ಈ ವೇಳೆ ಸಂಜೀವ್ ಛಲವಾದಿ, ದಾವೂದ್, ಇಕ್ಬಾಲ್ ಬೇಗ್, ಮೌನೇಶ, ಮಾರುತಿ ಇನ್ನಿತರರು ಇದ್ದರು.




