ರಾಯಚೂರು | ಗೃಹರಕ್ಷಕ ದಳದಲ್ಲಿ 54 ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ರಾಯಚೂರು ಜಿಲ್ಲೆಯ ಗೃಹರಕ್ಷಕ ದಳದ ತಾಲೂಕು ಹಾಗೂ ಉಪ ಘಟಕಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಒಟ್ಟು 54 ಸ್ವಯಂಸೇವಕ ಗೃಹರಕ್ಷಕ ಸದಸ್ಯರ (ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಅರ್ಹ ಹಾಗೂ ಸ್ವಯಂಸೇವಾ ಮನೋಭಾವ ಹೊಂದಿರುವ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಅರ್ಹತೆಗಳು: ಅಭ್ಯರ್ಥಿಗಳು ರಾಯಚೂರು ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟವರಾಗಿರಬೇಕು ಹಾಗೂ ಅರ್ಜಿ ಸಲ್ಲಿಸುವ ಘಟಕದ ವ್ಯಾಪ್ತಿಗೆ ಸಮೀಪದಲ್ಲಿ ವಾಸಿಸುತ್ತಿರಬೇಕು. ಕನಿಷ್ಠ 19ರಿಂದ ಗರಿಷ್ಠ 50 ವರ್ಷ ವಯೋಮಿತಿಯೊಳಗಿರಬೇಕು. ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ದೈಹಿಕವಾಗಿ ಸದೃಢರಾಗಿದ್ದು, ಆರೋಗ್ಯವಂತರಾಗಿರಬೇಕು ಹಾಗೂ ಗೃಹರಕ್ಷಕ ನಿಯಮಗಳ ವ್ಯಾಪ್ತಿಗೆ ಒಳಪಟ್ಟಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಅರ್ಜಿ ವಿತರಣೆ ಮತ್ತು ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ತಮ್ಮ 10ನೇ ತರಗತಿಯ ಅಂಕಪಟ್ಟಿಯನ್ನು ತೋರಿಸಿ, ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ನವೆಂಬರ್ 6ರಿಂದ 13ರವರೆಗೆ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಅರ್ಜಿ ಪಡೆದುಕೊಳ್ಳಬಹುದು. ಸರ್ಕಾರಿ ರಜಾ ದಿನಗಳಲ್ಲಿ ಅರ್ಜಿ ವಿತರಣೆ ಇರುವುದಿಲ್ಲ.

ಭರ್ತಿ ಮಾಡಿದ ಅರ್ಜಿಗಳನ್ನು ಜನ್ಮದಿನಾಂಕದ ದೃಢೀಕರಣ ಪತ್ರ, ವಿದ್ಯಾರ್ಹತೆಯ ದಾಖಲೆ, ಆಧಾ‌ರ್ ಕಾರ್ಡ್, ಮೊಬೈಲ್ ಸಂಖ್ಯೆ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ನವೆಂಬ‌ರ್ 16ರಿಂದ 30ರೊಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಆಯ್ಕೆ ಖಚಿತವಾಗುವುದಿಲ್ಲ. ಆಯ್ಕೆ ಸಮಿತಿಯ ಪರೀಕ್ಷೆ ಹಾಗೂ ತೀರ್ಮಾನವೇ ಅಂತಿಮವಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಒಂದು ವಾರದೊಳಗೆ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸಬೇಕು. ಗೃಹರಕ್ಷಕ ಸದಸ್ಯತ್ವವು ಸಂಪೂರ್ಣವಾಗಿ ಸ್ವಯಂಸೇವಾ ಹುದ್ದೆಯಾಗಿದ್ದು, ಇದು ಖಾಯಂ ಹುದ್ದೆಯಾಗಿರುವುದಿಲ್ಲ. ಸರ್ಕಾರದ ಆದೇಶದಂತೆ ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಮಾತ್ರ ಭತ್ಯೆ ಪಾವತಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿ ಶಾಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿಗೆ ಜಾತಿನಿಂದನೆ ಆರೋಪ: ಸಮಗ್ರ ತನಿಖೆಗೆ ಎಸ್ಎಫ್ಐ ಆಗ್ರಹ

ಹೆಚ್ಚಿನ ಮಾಹಿತಿಗಾಗಿ ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕ ದಳದ ಕಾರ್ಯಾಲಯ, ಪ್ರಥಮ ದರ್ಜೆ ಕಾಲೇಜು ಹತ್ತಿರ, ನಿಜಲಿಂಗಪ್ಪ ಕಾಲೋನಿ, ರಾಯಚೂರು-584101 ಅಥವಾ ದೂರವಾಣಿ ಸಂಖ್ಯೆ 08532-221679 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಿ ಶಾಲೆಗಳನ್ನು ಖಾಸಗಿಯವರೊಂದಿಗೆ ಜೋಡಿಸುವ ಯೋಜನೆಗೆ ಎಸ್‌ಎಫ್‌ಐ ತೀವ್ರ ವಿರೋಧ

ರಾಜ್ಯದ 2 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ...

ಯಾದಗಿರಿ | ದೋರನಹಳ್ಳಿ ಪಟ್ಟಣ ಪಂಚಾಯಿತಿಗೆ ಅನುದಾನ ಬಿಡುಗಡೆಗೆ ಆಗ್ರಹ: ನಮ್ಮ ಕರ್ನಾಟಕ ಸೇನೆ ಮನವಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ...

ಯಾದಗಿರಿ | ಗೋಡೆಗೆ ಕಾರು ಡಿಕ್ಕಿ, ನಾಲ್ವರು ಯುವಕರು ಸ್ಥಳದಲ್ಲೇ ಸಾವು!

ನಿರ್ಮಾಣ ಹಂತದ ಚೆನ್ನೈ- ಸೂರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಗದಗ | ಸರ್ಕಾರಿ ಕನ್ನಡ ಶಾಲೆಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ದತ್ತು ನೀಡಲು ನಿರ್ಧಾರ; ಎಸ್ಎಫ್ಐ ಖಂಡನೆ

"ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವೈಯಕ್ತಿಕ ಕೊಡುಗೆದಾರರ (Individual CSR) ಸಭೆಯಲ್ಲಿ...