ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ರಾಯಚೂರು ನಗರ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್ ಅವರ ನಿಧನ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಇಂದು ಬೆಳಿಗ್ಗೆ 11.30ರಿಂದ ನಗರದ ಅರಬ್ ಮೊಹಲ್ಲಾದ ಈದ್ಗಾ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಧ್ಯಾಹ್ನ 2 ಗಂಟೆಗೆ ಇದೇ ಇದ್ಗಾ ಮೈದಾನದಲ್ಲಿ ನಮಾಜ್-ಎ-ಜನಾಜಾ ನೆರವೇರಲಿದ್ದು, ಬಳಿಕ ನಗರದ ಕಮಲಿವಾಲೆ ಬಾಬಾ ಕಬರಸ್ಥಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಧಾನಸಭೆ ಚುನಾವಣೆ-2028: ಮಾನ್ವಿ–ದೇವದುರ್ಗದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಕದನ, ಕಾಂಗ್ರೆಸ್‌ಗೆ ಲಾಭವೇ?
ಸೈಯದ್ ಯಾಸೀನ್ ಅವರ ಅಂತಿಮ ದರ್ಶನ ಪಡೆಯಲು ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದೆ.




