ರಾಯಚೂರು | ಅಶ್ವಿನಿ ಅತ್ಯಾಚಾರ-ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದ ಮೇಲೆ ನಾಲ್ವರು ಪೊಲೀಸರು ಅಮಾನತು

Date:

ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಯುವತಿ ಅಶ್ವಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಸಿರವಾರ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

- Advertisement -

ಸಿರವಾರ ಠಾಣೆಯ ಮುಖ್ಯ ಪೇದೆಗಳಾದ ಭೀಮರಡ್ಡಿ ಹಾಗೂ ವೀರೇಶ ಮತ್ತು ಪೇದೆಗಳಾದ ದೇವರಾಜ ಹಾಗೂ ನಾಗರಾಜ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶುಗಿರಿ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಹೊಕ್ರಾಣಿ ಗ್ರಾಮದ ಅಶ್ವಿನಿ ಬುಧವಾರ ಸಂಜೆ ಬಹಿರ್ದೆಶೆಗೆ ತೆರಳಿ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಪಾಲಕರು ಸಿರವಾರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ಠಾಣೆಗೆ ತೆರಳಿ ದೂರು ದಾಖಲಿಸಲು ಮುಂದಾದರೂ ಪೊಲೀಸರು ಸೂಕ್ತವಾಗಿ ಸ್ಪಂದಿಸದೆ, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಅಶ್ವಿನಿಯ ಕುಟುಂಬಸ್ಥರು ಹಾಗೂ ದಲಿತ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ಸ್ಥಳಕ್ಕೆ ಆಗಮಿಸಿದ್ದ ಬಳ್ಳಾರಿ ಐಜಿಪಿ, ರಾಯಚೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ದೂರು ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನೆ ಅಗೆಯುವ ವೇಳೆ 360 ಪುರಾತನ ತಾಮ್ರದ ನಾಣ್ಯಗಳು ಪತ್ತೆ

ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಂಡು ಅಮಾನತು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು. ಇದೀಗ ಕರ್ತವ್ಯಲೋಪದ ಆರೋಪದ ಆಧಾರದ ಮೇಲೆ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...