ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹಿರೇಕೂಡ್ಲಿಗಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಸೆಪ್ಟೆಂಬರ್ 18ರಂದು ಆಯೋಜಿಸಲಾಗಿದ್ದ ಹಿರೇಕೂಡ್ಲಿಗಿ ಚಲೋ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಶಿವರಾಯ ಅಕ್ಕರಕಿ ಹೇಳಿದರು.
ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “ಘಟನೆಗೆ ಸಂಬಂಧಿಸಿದಂತೆ ಹೋರಾಟ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಡಿವೈಎಸ್‌ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ” ಎಂದರು.
“ಘಟನೆಗೆ ಸಂಬಂಧಿಸಿದಂತೆ ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಕ್ರಮವಹಿಸುವುದಾಗಿ ಭರವಸೆ ನೀಡಿದ್ದಾರೆ. ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಉಳಿದ ಬೇಡಿಕೆಗಳ ಈಡೇರಿಕೆಗೆ ಕಾಲಾವಕಾಶ ಕೇಳಿದ್ದರಿಂದ ಉದ್ದೇಶಿತ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಅಧಿಕಾರಿಗಳು ನೀಡಿದ ಭರವಸೆಯಂತೆ ಕ್ರಮವಹಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರೈತರ ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಸರ್ಕಾರದ ಕ್ರೂರತೆಗೆ ಏನು ಹೇಳೋಣ?: ಎಚ್‌ಡಿಕೆ ಕಿಡಿ
ಈ ಸಂದರ್ಭದಲ್ಲಿ ಎಂ ಆರ್ ಭೇರಿ, ಶಾಂತಕುಮಾರ ಹೊನ್ನಟಗಿ, ಮರೆಪ್ಪ ಮಲ್ದಕಲ್, ರಾಜು ಬೊಮ್ಮನಾಳ, ಮರಿಗೌಡ, ತಿಪ್ಪಣ್ಣ ಇದ್ದರು.
ಸಿಟಿಜನ್ ಜರ್ನಲಿಸ್ಟ್ ಹಫೀಜುಲ್ಲ