ರಾಯಚೂರು | ದಲಿತ ದೌರ್ಜನ್ಯ; ಸೆ.18ರ ಹಿರೇಕೂಡ್ಲಿಗಿ ಚಲೋ ಮುಂದೂಡಿಕೆ

Date:

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹಿರೇಕೂಡ್ಲಿಗಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಸೆಪ್ಟೆಂಬರ್‌ 18ರಂದು ಆಯೋಜಿಸಲಾಗಿದ್ದ ಹಿರೇಕೂಡ್ಲಿಗಿ ಚಲೋ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಶಿವರಾಯ ಅಕ್ಕರಕಿ ಹೇಳಿದರು.

- Advertisement -

ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “ಘಟನೆಗೆ ಸಂಬಂಧಿಸಿದಂತೆ ಹೋರಾಟ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಡಿವೈಎಸ್‌ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಘಟನೆಗೆ ಸಂಬಂಧಿಸಿದಂತೆ ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಕ್ರಮವಹಿಸುವುದಾಗಿ ಭರವಸೆ ನೀಡಿದ್ದಾರೆ. ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಉಳಿದ ಬೇಡಿಕೆಗಳ ಈಡೇರಿಕೆಗೆ ಕಾಲಾವಕಾಶ ಕೇಳಿದ್ದರಿಂದ ಉದ್ದೇಶಿತ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಅಧಿಕಾರಿಗಳು ನೀಡಿದ ಭರವಸೆಯಂತೆ ಕ್ರಮವಹಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರೈತರ ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಸರ್ಕಾರದ ಕ್ರೂರತೆಗೆ ಏನು ಹೇಳೋಣ?: ಎಚ್‌ಡಿಕೆ ಕಿಡಿ

ಈ ಸಂದರ್ಭದಲ್ಲಿ ಎಂ ಆರ್ ಭೇರಿ, ಶಾಂತಕುಮಾರ ಹೊನ್ನಟಗಿ, ಮರೆಪ್ಪ ಮಲ್ದಕಲ್, ರಾಜು ಬೊಮ್ಮನಾಳ, ಮರಿಗೌಡ, ತಿಪ್ಪಣ್ಣ ಇದ್ದರು.

ಸಿಟಿಜನ್‌ ಜರ್ನಲಿಸ್ಟ್‌ ಹಫೀಜುಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...