ರಾಯಚೂರು | ಸಿರಿಧಾನ್ಯಗಳ ಕುರಿತು ಅರಿವು ಮೂಡಿಸಲು ಜಾಗೃತಿ ನಡಿಗೆ

Date:

ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ಮೇಳ ಜನವರಿ ತಿಂಗಳಲ್ಲಿ ನಡೆಯುತ್ತದೆ. ಅದರ ಭಾಗವಾಗಿ ಜಿಲ್ಲಾ ಮಟ್ಟದಲ್ಲಿಯೂ ಸಿರಿಧಾನ್ಯ ಮೇಳ ನಡೆಸಲಾಗುತ್ತಿದೆ. ಸಿರಿಧಾನ್ಯಗಳ ಕುರಿತು ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌ ಬೋಸರಾಜು ಹೇಳಿದ್ದಾರೆ.

- Advertisement -

ರಾಯಚೂರಿನಲ್ಲಿ ಸಿರಿಧಾನ್ಯ ಉತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಆಯೋಜಿಸಿದ್ದ ಸಿರಿಧಾನ್ಯಗಳ ಜಾಗೃತಿ ನಡಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. “ಸಿರಿಧಾನ್ಯ ಬೆಳೆ ಮತ್ತು ಬಳಕೆ ಕುರಿತು ರೈತರಿಗೆ ಮತ್ತು ಗ್ರಾಹಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಾಗೃತಿ ನಡಿಗೆಯು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾಗಿ ಬಸವೇಶ್ವರ ವೃತ್ತದ ಮೂಲಕ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ವರೆಗೆ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕರಾಂ ಪಾಂಡ್ವೆ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಹನುಮಂತಪ್ಪ ಸೇರಿದಂತೆ ಕೃಷಿ ವಿವಿ ಹಾಗೂ ಕೃಷಿ ಇಲಾಖೆ ಸಿಬ್ಬಂಧಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...