ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ ಸಮೀಪ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ರಾಜ (30) ಎಂದು ಗುರುತಿಸಲಾಗಿದೆ. ರಾಜ ಅವರು ಹೆದ್ದಾರಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಬೈಕ್ ಸವಾರ ಮಾರಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕಟ್ಟಡ ಕುಸಿತ ದುರಂತ; ಮೃತರಾದ 3 ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ: ಜಿ ಕುಮಾರ್ ನಾಯಕ ಭರವಸೆ
ಘಟನೆಯ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.




