ರಾಯಚೂರು | ರಾಜ್ಯ ಸರ್ಕಾರದ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ: ಸರ್ಕಾರದ ಶವಯಾತ್ರೆ, ಪ್ರತಿಕೃತಿ ದಹನ

Date:

ಆರ್ಥಿಕ ದಿವಾಳಿತನದತ್ತ ಸಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸರ್ಕಾರದ ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ರಾಜ್ಯದಲ್ಲಿ ಗಂಭೀರ ಬರ ಆವರಿಸಿದ್ದರೂ ಇಂದಿಗೂ ಬರ ಘೋಷಣೆಯಲ್ಲಿಯೇ ಮೀನಾಮೇಷ ಏಣಿಸುತ್ತಿದೆ. ಬರ ಘೋಷಣೆಯಲ್ಲಿಯೂ ತಾರತಮ್ಯ ಮಾಡುತ್ತಿದ್ದು ಕಾಂಗ್ರೆಸ್ ಶಾಸಕರೇ ರಾಜೀನಾಮೆ ನೀಡುವಂತಾಗಿದೆ. ಬರ ಕಾಮಗಾರಿ, ಪರಿಹಾರ ನೀಡದೇ ಅನ್ಯಾಯ ಮಾಡುತ್ತಿರುವ ಸರ್ಕಾರ ಖಾಲಿ ಕೈಯಲ್ಲಿ ಪರಿಹಾರ ನೀಡುವದಾಗಿ ಸುಳ್ಳು ಹೇಳುತ್ತಿದೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಅಭಿವೃದ್ದಿಗೆ ಅನುದಾನ ಇಲ್ಲದೇ ಹೋಗಿದೆ. ಹಣವಿಲ್ಲದೇ ಅನುದಾನ ಘೋಷಣೆ ಮಾಡುವುದನ್ನು ಆರ್ಥಿಕ ಇಲಾಖೆಯೇ ಆಕ್ಷೇಪ ವ್ಯಕ್ತಪಡಿಸಿರುವುದೆ ನಿರ್ದೇಶನ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಸರ್ಕಾರಿ ನೌಕರರು, ಹೊರಗುತ್ತಿಗೆ ನೌಕರರಿಗೆ ವೇತನಕ್ಕೂ ಹಣವಿಲ್ಲ ಪರಸ್ಥಿತಿಯನ್ನು ಸರ್ಕಾರ ಉದ್ಭವಕ್ಕೆ ಕಾರಣವಾಗಿದೆ. ಎನ್‌ಡಿಆರ್‌ಎಫ್ ನಿಯಮಗಳಂತೆ ಪರಿಹಾರ ನೀಡುವುದಾಗಿ ಹೇಳುವ ಸರ್ಕಾರ ಹಿಂದೇಟು ಹಾಕುತ್ತಲೇ ಇದೆ. ರಾಜ್ಯದಲ್ಲಿ ವಿದ್ಯುತ್ ಕೊರತೆ ಎದುರಾಗಿದ್ದು ಅನಿಮಿಯತ್ ಲೋಡ್ ಶೆಡ್ಡಿಂಗ್ ಪ್ರಾರಂಭಿಸಿದೆ. ಬರದ ಮಧ್ಯೆಯೂ ಕೃಷಿ ಪಂಪಸೆಟ್ ನಂಬಿರುವ ರೈತರು ಕಂಗಾಲಾಗಲು ಸರ್ಕಾರವೇ ನೇರ ಹೊಣೆಯಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡದೇ ವೃದ್ದಾಪ್ಯವೇತನ, ವಿಧವಾವೇತನ ಸೇರಿದಂತೆ ಸಮಾಜಿಕ ಯೋಜನೆಗಳಿಗೂ ಅನುದಾನವಿಲ್ಲದೇ ಪರಿಶೀಲನೆ ಹೆಸರಿನಲ್ಲಿ ತಡೆಲಾಗಿದೆ. ಸರ್ಕಾರ ಜನರ ವಿರೋಧಿ ನೀತಿ , ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಸಿಡಿಲು ಬಡಿದು ರೈತ ಸಾವು, ಮತ್ತೋರ್ವ ಗಂಭೀರ ಗಾಯ

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕರಪ್ಪ, ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಂದ್ರ ಜಲ್ದಾರ, ರಾಘವೇಂದ್ರ ಉಟ್ಕೂರು, ರಾಜಕುಮಾರ, ಕಡಗೋಳ ಆಂಜಿನೇಯ್ಯ, ಡಾ.ನಾಗರಾಜ ಬಾಲ್ಕಿ, ಬಂಗಿ ನರಸರೆಡ್ಡಿ,ಶರಣಮ್ಮ ಕಾಮರೆಡ್ಡಿ, ಸುಲೋಚನಾ ಆಲ್ಕೂರು, ಅನಿತಾ, ಶಿವಬಸ್ಸಪ್ಪ ಮಾಲಿಪಾಟೀಲ್, ರಾಮಚಂದ್ರಕಡಗೋಳ, ಜೆಮ್ಸ್, ತಿರುಮುಲರೆಡ್ಡಿ,ಪಿ.ಯಲ್ಲಪ್ಪ, ಶರಣಬಸವ ಜೋಳದಡಗಿ, ಆಂಜಿನೇಯಲು, ಮೌನೇಶ ಜಗ್ಲಿ, ಮುಕ್ತಿಯಾರ್, ಮಲ್ಲಿಕಾರ್ಜುನ ಜಕ್ಕಲದಿನ್ನಿ, ಬಂಡೇಶ ವಲ್ಕಂದಿನ್ನಿ, ಜಂಬಣ್ಣ ನಿಲೋಗಲ್, ಮಹೇಂದ್ರರೆಡ್ಡಿ ಸೇರಿದಂತೆ ಅನೇಕರು ಭಾಗಿಯಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಪಿಎಲ್‌ಡಿ ಮತ್ತು ಡಿಸಿಸಿ ಬ್ಯಾಂಕ್‌ಗಳ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

ಚಿಂತಾಮಣಿ ತಾಲ್ಲೂಕಿನ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ 2025-26 ನೇ...

ಕೋಲಾರ | ಸಾಲ ಮರುಪಾವತಿಸಿ, ಸಹಕಾರಿ ವ್ಯವಸ್ಥೆ ಉಳಿಸಿ: ಕೊತ್ತೂರು ಮಂಜುನಾಥ್

ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಮತ್ತೆ ಸಾಲ ಸೌಲಭ್ಯ ಕಲ್ಪಿಸಲು...

ಉತ್ತರ ಕನ್ನಡ | ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ನಾಲ್ವರು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಬಿಸಗೋಡ ರಸ್ತೆ ಮಾರ್ಗದಲ್ಲಿರುವ ಸ್ಮಶಾನದ...

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...