ರಾತ್ರಿ ಬಯಲು ಶೌಚಕ್ಕೆಂದು ಮನೆಯಿಂದ ಹೊರಗೆ ತೆರಳಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾದ ಘಟನೆ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಅಶ್ವಿನಿ (22)ಎಂದು ಗುರುತಿಸಲಾಗಿದೆ. ರಾತ್ರಿ ಬಯಲು ಶೌಚಕ್ಕೆ ತೆರಳಿದ್ದ ಅಶ್ವಿನಿ ಬಳಿಕ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ರಾತ್ರಿ ವೇಳೆ ಹುಡುಕಾಟ ನಡೆಸಿದ್ದರು. ಈ ನಡುವೆ ಬೆಳಗ್ಗೆ ಜಮೀನಿಗೆ ತೆರಳಿದ್ದ ರೈತರಿಗೆ ಬಾವಿಯಲ್ಲಿ ಯುವತಿಯ ಮೃತದೇಹ ಕಾಣಿಸಿಕೊಂಡಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಬಿಜಿರಾಮ್ ಜಿ ಕಾರ್ಮಿಕರ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ
ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಕ್ರಮ ಕೈಗೊಳ್ಳಲಾಗಿದೆ.




