ರಾಯಚೂರು | ಉದ್ರಿ ಕೊಡಲಿಲ್ಲವೆಂದು ಅಂಗಡಿ ಮಾಲೀಕನ ಬರ್ಬರ ಕೊಲೆ

Date:

ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಎಲ್.ಬಿಎಸ್. ನಗರ ಬಡಾವಣೆಯ ಕ್ರೌನ್ ಬೇಕರಿ ಸಮೀಪ ಶನಿವಾರ ಮಧ್ಯಾಹ್ನ ನಡೆದಿದೆ. ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದು, ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

ಕೊಲೆಯಾದ ವ್ಯಕ್ತಿಯನ್ನು ಬಾಪುರ ನರಸಿಂಹ (40) ಎಂದು ಗುರುತಿಸಲಾಗಿದೆ. ಎಲ್ ಬಿಎಸ್ ನಗರದ ಬಡಾವಣೆಯಲ್ಲಿರುವ ಅಂಗಡಿಗೆ ಬಂದಿದ್ದ ಯುವಕರು ಉದ್ರಿ ನೀಡುವಂತೆ ಕೇಳಿದ್ದಾರೆ ಎನ್ನಲಾಗಿದೆ. ಆದರೆ ಅಂಗಡಿ ಮಾಲೀಕ ಬಾಪುರ ನರಸಿಂಹ ಅವರು ಉದ್ರಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕರು ಅವರೊಂದಿಗೆ ಗಲಾಟೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಉದ್ರಿ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನೆಯಲ್ಲಿ ನರಸಿಂಹ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಯುವಕರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ನಡೆದ ಸ್ಥಳದ ಮಾಹಿತಿ ಸಂಗ್ರಹಿಸಿರುವ ಪೊಲೀಸರು, ಕೊಲೆ ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಸಣ್ಣ ವಿಚಾರವಾಗಿ ನಡೆದ ಎನ್ನಲಾದ ಗಲಾಟೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ರಾಯಚೂರು ನಗರದ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸುರಕ್ಷತೆಯ ಕುರಿತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಆರೋಪಿಗಳ ಗುರುತು ಪತ್ತೆಹಚ್ಚಿ ಕೃತ್ಯದ ಹಿಂದಿನ ನಿಖರ ಕಾರಣವನ್ನು ಬಹಿರಂಗಪಡಿಸಲು ಪೊಲೀಸರು ಮುಂದಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಕಾಶಪ್ಪನವರ ತಿರುಗೇಟು; ಯತ್ನಾಳರ ‘ಜೆಸಿಬಿ’ ಬಗ್ಗೆಯೂ ವ್ಯಂಗ್ಯ!

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ...

ರಾಜಕೀಯ ಬದಲಾವಣೆಗೆ ಜನಾಭಿಪ್ರಾಯದ ಸಂಘಟನೆ ಅಗತ್ಯ: ಜಾಗೃತ ಕರ್ನಾಟಕದ ರಾಜ್ಯ ಪ್ರವಾಸ ಆರಂಭ

ರಾಜಕೀಯವನ್ನು ದೂರವಿಡುವುದಲ್ಲ, ಜನಪರ ರಾಜಕಾರಣವನ್ನು ರೂಪಿಸುವುದೇ ಗುರಿ; ಸಾಮಾಜಿಕ ನ್ಯಾಯ, ಕೋಮು...

ಶಿವಮೊಗ್ಗ | ಜಿಲ್ಲಾ ಶೋಟೊಕಾನ್ ಕರಾಟೆ ಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು...

ರೈತರ ಬೆನ್ನಿಗೆ ರಾಜ್ಯ ಸರ್ಕಾರ: ಸಚಿವ ಚಲುವರಾಯಸ್ವಾಮಿ ಭರವಸೆ

ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವುದಿಲ್ಲ. ರೈತರ ಹಿತ...