ರಾಯಚೂರು | ಸಮಯಕ್ಕೆ ಬಾರದ ಬಸ್‌; ಶಾಲಾ ವಿದ್ಯಾರ್ಥಿಗಳ ಪರದಾಟ

Date:

ಲಿಂಗಸುಗೂರು ತಾಲ್ಲೂಕು ಮುದಗಲ್ ಪಟ್ಟಣದಿಂದ ಅಂಕಲಿಮಠ – ಮೂದೇನೂರು ಗ್ರಾಮಕ್ಕೆ ತೆರಳುವ ಬಸ್ ಸರಿಯಾದ ಸಮಯಕ್ಕೆ ಬಾರದ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

- Advertisement -

ಮುದಗಲ್ ಪಟ್ಟಣದಿಂದ ಮಧ್ಯಾಹ್ನ 3-30ಕ್ಕೆ ಬಿಡುವ ಬಸ್ ಸರಿಯಾಗಿ ಬಾರದ ಹಿನ್ನಲೆಯಲ್ಲಿ ಮೂದೇನೂರು ಸರಕಾರಿ ಶಾಲೆಗೆ ಹೋಗುವ ವಂದಲಿ, ಮುದ್ದಲಗುದ್ದಿ, ಬ್ಯಾಲಿಹಾಳ, ರಾಮತ್ನಾಳ ಗ್ರಾಮದ ಸುಮಾರು 50-60 ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಹಾಗೂ ಈ ವಿದ್ಯಾರ್ಥಿಗಳು ಮಳೆ, ಗಾಳಿ, ಬಿಸಿಲು ಲೆಕ್ಕಿಸದೆ ನಡೆದುಕೊಂಡು ಮನೆ ಸೇರಬೇಕಾಗಿದೆ ಎಂದು ವಿದ್ಯಾರ್ಥಿಗಳ ಪಾಲಕರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಮುದಗಲ್ ದಿಂದ ಮಧ್ಯಾಹ್ನ 3-30ಕ್ಕೆ ಬಸ್ ಬಾರದೆ ಇದ್ದರೆ ಕಾಲೇಜ್ ವಿದ್ಯಾರ್ಥಿಗಳು ಪ್ರಯಾಣಿಕರು ಸೇರಿಸಿ ಸುಮಾರು 150ಕ್ಕೂ ಜನರು 5-30 ಬಸ್ಸಿಗೆ ಹೆಚ್ಚಿನ ಹೊರೆಬೀಳುತ್ತದೆ ಈ ಸಮಸ್ಯೆ ಬಗ್ಗೆ ಈ ಭಾಗದ ಜನರು ಸಾರಿಗೆ ಇಲಾಖೆ ಅಧಿಕಾರಗಳಿಗೆ ಮಾಹಿತಿ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳ ಪಾಲಕರು ಆರೋಪಿಸಿದ್ದಾರೆ

ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ಈ ಬಸ್ಸಿನ ಈ ಮಾರ್ಗ ಪ್ರಾರಂಭ ಮಾಡಿರುವದರಿಂದ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ ಎಂದು ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಮಿತಿ ಜಿಲ್ಲಾಧ್ಯಕ್ಷ ರವಿಕುಮಾರ ನಾಯಕ ಆರೋಪಿಸಿದರು ಇದೆ ಬಸ್ಸು 5-30ಕ್ಕೆ ಬಾರದ ಕಾರಣ ಮುದಗಲ್ ದಿಂದ ಉಪ್ಪಾರನಂದಿಹಾಳ, ಚಿಕ್ಕಲೆಕ್ಕಿಹಾಳ, ಹಿರೇಲೆಕ್ಕಿಹಾಳ, ಆಮದಿಹಾಳ ಗ್ರಾಮದ ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ತಿಂಗಳೊಳಗೆ ಮೂವರು ದಲಿತರ ಹತ್ಯೆ: ದಲಿತಪರ ಹೋರಾಟಗಾರರ ಕಳವಳ

ಈ ಕೂಡಲೇ ಮುದಗಲ್ ದಿಂದ ಅಂಕಲಿಮಠ ಮೂದೇನೂರು ಸರಿಯಾದ ಸಮಯಕ್ಕೆ ಬಸ್ ಓಡಿಸಿ ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

    WhatsApp Image 2025 11 17 at 3.21.38 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

    ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

    ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

    ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

    ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

    ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

    ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...