ರಾಯಚೂರು | ನೀಟ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲ; ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ: ಶರಣಕುಮಾರ

Date:

ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಪಾರದರ್ಶಕತೆ ಹಾಗೂ ದಕ್ಷತೆಯಿಂದ ನಿರ್ವಹಿಸುವಲ್ಲಿ ವಿಫಲವಾಗಿದ್ದು, ಮಾನವೀಯ ಸಂವೇದನೆಯನ್ನೇ ಕಳೆದುಕೊಂಡಿದೆ. ಕೂಡಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿ ಯುವಜನ ಒಕ್ಕೂಟದ ಸಂಚಾಲಕ ಶರಣುಕುಮಾರ ಹೇಳಿದರು.

- Advertisement -

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ನೀಟ್ ಪ್ರಶ್ನೆಪರೀಕ್ಷೆ ಸೋರಿಕೆಯಿಂದ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಬಹುದೊಡ್ಡ ಜಾಲವಿದ್ದರೂ ಕೇಂದ್ರದ ಶಿಕ್ಷಣ ಸಚಿವರು ತಡೆಯುಲ್ಲಿ ವಿಫಲರಾಗಿದ್ದು ಕೂಡಲೇ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಳೆದ 25 ದಿನಗಳಿಂದ ಕಾಕ್ರೋಚ ಜನತಾ ಪಾರ್ಟಿ ನೇತೃತ್ವದಲ್ಲಿ ಹೋರಾಟಗಾರ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಕನಿಷ್ಟ ಸ್ಪಂದಿಸುವ ಕೆಲಸ ಮಾಡಿಲ್ಲ. ಸಂವೇದನೆಯನ್ನೇ ಕಳೆದುಕೊಂಡಿದ್ದರಿಂದ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟು ಹೋರಾಟವನ್ನು ತೀವ್ರಗೊಳಿಸಬೇಕು ಎಂದರು.

ನಂತರ ಮಾತನಾಡಿದ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಫೈಸಲ್ ಖಾನ್, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹೋರಾಟಗಾರರರನ್ನು ಜೈಲಿಗೆ ಹಾಕುತ್ತಿದೆ. ಅತ್ಯಾಚಾರಿಗಳನ್ನು ಮುಕ್ತವಾಗಿ ಬಿಡುತ್ತಿದೆ. ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ನೈತಿಕತೆ ಪ್ರದರ್ಶಿಸಿಲ್ಲ. ಬಿಜೆಪಿ ನೇತೃತ್ವದ ಸರ್ಕಾರ ಬಂದ ನಂತರವೇ ನೂರಾರು ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ. ಆದರೆ ತಪ್ಪು ತಿದ್ದಿಕೊಳ್ಳುವ ಪ್ರಯತ್ನ ಮಾಡದೇ ಅಮಾಯಕ ಜೀವಗಳ ಬಲಿಗೆ ಕೇಂದ್ರ ಸರ್ಕಾರ ಕಾರಣವಾಗಿದೆ. ಕೂಡಲೇ ಕೇಂದ್ರ ವಿರುದ್ದ ವಿದ್ಯಾರ್ಥಿ ಯುವಜನರು ರಾಯಚೂರಿನಲ್ಲಿಯೂ ಹೋರಾಟಕ್ಕೆ ನಿರ್ಧರಿಸಿದ್ದು ಯುವಕರು, ವಿದ್ಯಾರ್ಥಿಗಳು ಬೆಂಬಲಿಸಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೃಷಿ ಇಲಾಖೆ ನೇಮಕಾತಿಯಲ್ಲಿ ನಿಯಮ ಉಲ್ಲಂಘನೆ ಆರೋಪ: ಕೆಇಎ ವಿರುದ್ಧ ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

ಈ ಸಂದರ್ಬದಲ್ಲಿ ವಿಶ್ವನಾಥ ಬಲ್ಲಿದೇವ, ಪ್ರದೀಲ್, ಪ್ರವೀಣಕುಮಾರ, ಮೋಹನ್ ಸೇರಿ ಅನೇಕರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...