ರಾಯಚೂರು | ಯುವಜನರ ಮೇಲಿನ ದಾಳಿ ಚರ್ಚೆಗೆ ಕೇಂದ್ರ ಸರ್ಕಾರ ಸಿದ್ಧವಿಲ್ಲ: ಸಂಸದ ಜಿ.ಕುಮಾರ ನಾಯಕ ಆರೋಪ

Date:

ಕೇಂದ್ರದ ಬಿಜೆಪಿ ಸರಕಾರ ಯುವಜನರ ಮೇಲೆ ನಡೆದ ದಾಳಿಯ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿಲ್ಲ, ಹಲವು ದಿನಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಸಂಸತ್ ಮುತ್ತಿಗೆ ನಡೆಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ದೆಹಲಿಯಲ್ಲಿ ನಡೆದ ಘಟನೆ ಅಮಾನವೀಯವಾಗಿದ್ದರೂ, ಕೇಂದ್ರ ಗೃಹ ಸಚಿವರು ಈ ಕುರಿತು ಉತ್ತರ ನೀಡಲು ಮುಂದಾಗಿಲ್ಲ ಎಂದು ಸಂಸದ ಜಿ. ಕುಮಾರ ನಾಯಕ ಆರೋಪಿಸಿದರು.

- Advertisement -

ನಗರದ ಸಂಸದರ ಕಚೇರಿಯಲ್ಲಿ ಮಾತನಾಡಿ, ಕಾಯ್ದೆಗಳ ತಿದ್ದುಪಡಿ ಮಸೂದೆ ಮಂಡನೆ ಹೆಸರಿನಲ್ಲಿ ಜನರ ಖಾಸಗಿತನಕ್ಕೆ ಧಕ್ಕೆ ಹಾಗೂ ಆರ್ಥಿಕ ಹೊರೆಯಾಗುವಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದು, ತನ್ನ ಉತ್ತರದಾಯಿತ್ವವನ್ನು ಮರೆತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್‌ನಲ್ಲಿ ಸದಸ್ಯರು ಎತ್ತುತ್ತಿರುವ ಆಕ್ಷೇಪಣೆಗಳಿಗೆ ಸಮರ್ಪಕ ಉತ್ತರ ನೀಡದೆ ವಿಷಯಗಳನ್ನು ಮರೆಮಾಚುತ್ತಿದ್ದಾರೆ ಎಂದು ಅವರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಸಂಸತ್ ಅಧಿವೇಶನ ಆರಂಭವಾದಾಗಿನಿಂದ ವಿದ್ಯಾರ್ಥಿ ಹಾಗೂ ಯುವಜನರ ಮೇಲೆ ನಡೆದ ದಾಳಿಯ ಕುರಿತು ಚರ್ಚಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧವಿಲ್ಲ. ಯುವಕರು ನಡೆಸಿದ ಹೋರಾಟ ಏಕಾಏಕಿ ನಡೆದದ್ದಲ್ಲ. ಹಲವು ದಿನಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಸಂಸತ್ ಮುತ್ತಿಗೆ ನಡೆಸಲಾಗಿದೆ ಎಂದರು.

ಡಿಜಿಟಲೀಕರಣದ ಬಗ್ಗೆ ಪ್ರಚಾರ ಪಡೆಯುತ್ತಿರುವ ಕೇಂದ್ರ ಸರ್ಕಾರ, ಯುಪಿಐ ಸೇರಿದಂತೆ ಇತರ ಡಿಜಿಟಲ್ ಆರ್ಥಿಕ ವಹಿವಾಟುಗಳ ಮೇಲೆ ತೆರಿಗೆ ವಿಧಿಸಲು ಮುಂದಾಗಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಜನರ ಮೇಲೆ ಹೆಚ್ಚುತ್ತಿರುವ ಆರ್ಥಿಕ ಹೊರೆಯನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಕಲಚೇತನರ ಪಿಂಚಣಿ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಸಚಿವ ಅಜಯ ಧರಂಸಿಂಗ್‌ಗೆ ಮನವಿ

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ, ಕೆ. ಶಾಂತಪ್ಪ ಜಯವಂತರಾವ್ ಪತಂಗೆ, ಜಿ. ಶಿವಮೂರ್ತಿ, ಎನ್.ಶ್ರೀನಿವಾಸರೆಡ್ಡಿ ಅಮರೇಗೌಡ ಹಂಚನಾಳ, ರಾಜಶೇಖರ ನಾಯಕ, ಆಂಜಿನಯ ಕುರುಬದೊಡ್ಡಿ, ನರಸಿಂಹಲು ಮಾಡಗಿರಿ, ಯುವ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ ಗಟ್ಟು ಸುಧೀಂದ್ರ ಜಹಾಗೀರದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...