ರಾಯಚೂರು | ಬರ ಪರಿಹಾರಕ್ಕೆ ಕೇಂದ್ರವೂ ಹೊಣೆ, ಕೇಂದ್ರದ ವಿರುದ್ದ ಹೋರಾಟ: ಯತೀಂದ್ರ ಸಿದ್ದರಾಮಯ್ಯ

Date:

ಬರ ಪರಿಹಾರ ನೀಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಕೇಂದ್ರ ಸರ್ಕಾರದ ಜವಾಬ್ದಾರಿಯೂ ಆಗಿದೆ. ಕಳೆದ ಬಾರಿ ಮನವಿ ಸಲ್ಲಿಸಿದರೂ ಕೇಂದ್ರದಿಂದ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಬೇಕಾಯಿತು. ಇದೇ ಪರಿಸ್ಥಿತಿ ಮುಂದುವರಿದರೆ, ಹೋರಾಟದ ಮೂಲಕ ಪರಿಹಾರ ಪಡೆಯಬೇಕಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

- Advertisement -

ಅವರಿಂದು ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎನ್‌ಡಿಆರ್‌ಎಫ್ ನಿಯಮಗಳ ಪ್ರಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರವನ್ನು ಬಿಡುಗಡೆ ಮಾಡಬೇಕು. ಪರಿಹಾರ ನೀಡಲು ವಿಳಂಬ ಮಾಡಿದರೆ ಕೇಂದ್ರದ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ರಾಜ್ಯವು ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಪಾವತಿಸುತ್ತಿದೆ. ಆದರೆ, ರಾಜ್ಯದ ತೆರಿಗೆ ಪಾಲನ್ನು ಕೇಳಿದರೂ ಕೇಂದ್ರ ಸರ್ಕಾರ ಸಮರ್ಪಕವಾಗಿ ನೀಡುತ್ತಿಲ್ಲ. ಈ ಹಿಂದೆ ದೆಹಲಿಯಲ್ಲಿ ಹೋರಾಟ ನಡೆಸಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿ ತನ್ನ ತೆರಿಗೆ ಪಾಲನ್ನು ಪಡೆಯಬೇಕಾಯಿತು ಎಂದು ಹೇಳಿದರು.

ನ್ಯಾಯಾಲಯದ ಮೊರೆ ಹೋಗುವ ಪರಿಸ್ಥಿತಿ ಬರುವ ಮೊದಲೇ ರಾಜ್ಯಕ್ಕೆ ನೀಡಬೇಕಾದ ತೆರಿಗೆ ಪಾಲು ಹಾಗೂ ಬರ ಪರಿಹಾರವನ್ನು ಬಿಡುಗಡೆ ಮಾಡಬೇಕು. ಹಿಂದಿನ ರೀತಿಯಲ್ಲಿ ವಿಳಂಬ ಮಾಡದೆ, ಈ ಬಾರಿ ರಾಜ್ಯಕ್ಕೆ ಸಮರ್ಪಕವಾಗಿ ಬರ ಪರಿಹಾರ ನೀಡಬೇಕು. ಇಲ್ಲವಾದರೆ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ವಿಫಲವಾಗಿದ್ದು, ಇದೀಗ ಕೇವಲ ರಾಜಕೀಯ ಹಾಗೂ ಪ್ರಚಾರದ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ಬಿಜೆಪಿ ಪಾದಯಾತ್ರೆಯ ಪ್ರಮುಖ ಉದ್ದೇಶ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂಬುದಾಗಿತ್ತು. ಆದರೆ, ಪಾದಯಾತ್ರೆ ಆರಂಭಕ್ಕೂ ಮುನ್ನವೇ ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈಗ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಮತ್ತು ಪ್ರಚಾರದ ಉದ್ದೇಶದಿಂದ ಕೂಡಿದೆ ಎಂದರು.

ರಾಜ್ಯ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗಳು ಕೇವಲ ಊಹಾಪೋಹಗಳಾಗಿವೆ. ರಾಜ್ಯ ಸರ್ಕಾರದಿಂದ ಯಾರೂ ರಾಜೀನಾಮೆ ನೀಡುವುದಿಲ್ಲ. ಯಾವುದೇ ವಿಕೆಟ್ ಕೂಡ ಪತನವಾಗುವುದಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಎನ್.ಎಸ್. ಬೋಸರಾಜು

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು, ಕಾಂಗ್ರೆಸ್ ಮುಖಂಡ ಮಹಮದ್ ಶಾಲಂ, ನಾಗವೇಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...