ರಾಯಚೂರು | ರೈತರ ನೆರವಿಗೆ ಬಾರದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು; ಜೆಡಿಎಸ್ ಜಿಲ್ಲಾಧ್ಯಕ್ಷ ಆರೋಪ

Date:

ರಾಜ್ಯದಲ್ಲಿ ಬರ ಆವರಿಸಿದ್ದು, ಬರ ಕಾಮಗಾರಿಗೆ ಕೇವಲ ಜಿಲ್ಲೆಗೆ 9 ಕೋಟಿ ರೂ. ಬಿಡುಗಡೆಯಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ನೆರವಿಗೆ ಬಾರದೇ ಸಂಪೂರ್ಣ ವಿಫಲವಾಗಿವೆ ಎಂದು ಜೆಡಿಎಸ್ ರಾಯಚೂರು ಜಿಲ್ಲಾಧ್ಯಕ್ಷ ಎಂ ವಿರುಪಾಕ್ಷಿ ಹೇಳಿದರು.

- Advertisement -

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿದೆ. ಜಿಲ್ಲೆಯಲ್ಲಿ ಆರು ತಾಲೂಕಿನ ಏಳು ಕ್ಷೇತ್ರದಲ್ಲಿ ಸರ್ಕಾರ ಬರ ಘೋಷಣೆ ಮಾಡಿತ್ತು. ನಂತರ ಎರಡು ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಜಿಲ್ಲಾಡಳಿತ, ಕಂದಾಯ ಇಲಾಖೆ ಕೃಷಿ ಇಲಾಖೆ ಸೇರಿ ಬರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಸರ್ಕಾರ ಬರ ಕಾಮಗಾರಿಗೆ ಜಿಲ್ಲೆಗೆ 9 ಕೋಟಿ ರೂ. ಬಿಡುಗಡೆ ಮಾಡಿದೆ. ಆದರೆ ಕೇವಲ ಕುಡಿಯುವ ನೀರಿಗೆ ಆಯಾ ತಾಲೂಕಿಗೆ 50 ಲಕ್ಷ ರೂ. ನೀಡಿದೆ. ಸರ್ಕಾರದ ಆದೇಶದ ಮೇರೆಗೆ ಕಾಮಗಾರಿ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ. ಆದರೆ, ಯಾವುದೇ ಕಾಮಗಾರಿ ಮಾಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಹತ್ತಿ, ಭತ್ತ, ಮೆಣಸಿನಕಾಯಿ, ತೊಗರಿ ಸೇರಿ ಇತರೆ ಬೆಳೆಗಳು ನಾಶವಾಗಿವೆ. ಸರ್ಕಾರ ರೈತರ ನೆರವಿಗೆ ಬಂದಿಲ್ಲ. ಜಿಲ್ಲೆಯಲ್ಲಿ ಈವರೆಗೆ 27 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 25 ಮಂದಿ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಿದ್ದು, ಇನ್ನೂ ಇಬ್ಬರಿಗೆ ಪರಿಹಾರ ನೀಡಬೇಕಿದೆ. ರಾಜ್ಯದಲ್ಲಿ ಬರಗಾಲ ವೀಕ್ಷಣೆಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಪ್ರತಿ ಜಿಲ್ಲೆಯಲ್ಲಿ ಬರ ಅಧ್ಯಯನಕ್ಕಾಗಿ ಶಾಸಕರು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಸಮಿತಿ ಮಾಡಿದ್ದು, ಆಯಾ ಜಿಲ್ಲೆಯಲ್ಲಿ ಅಧ್ಯಯನ ಮಾಡಲಿದ್ದಾರೆ” ಎಂದರು.

ಜಿಲ್ಲೆಯಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಶಾಸಕಿ ಕರೆಮ್ಮ ಜಿ ನಾಯಕ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಮಹಾಂತೇಶ ಪಾಟೀಲ್ ಅತ್ತನೂರು, ನರಸಿಂಹ ನಾಯಕ, ಸಿದ್ದು ಬಂಡಿ ಶಿವಶಂಕರ ವಕೀಲ, ಲಕ್ಷ್ಮಿಪತಿ, ಬುಡ್ಡನಗೌಡ ಸೇರಿದಂತೆ ಪದಾಧಿಕಾರಿಗಳು ಒಳಗೊಂಡು ನವೆಂಬರ್‌ 17, 18 ಮತ್ತು 19ರಂದು ಬರ ಅಧ್ಯಯನ ಕೈಗೊಳ್ಳಲಿದ್ದೇವೆ” ಎಂದು ತಿಳಿಸಿದರು.

“ಬರ ಅಧ್ಯಯನ ನಡೆಸಿ ಬೆಳೆಹಾನಿ ಕುರಿತು ವರಿಷ್ಠರಿಗೆ ವರದಿ ಸಲ್ಲಿಸುತ್ತೇವೆ. ನಂತರ 19 ಶಾಸಕರ ಮೂಲಕ, ಬೆಳೆನಷ್ಟ ಪರಿಹಾರ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ, ಜಿಲ್ಲೆಯಲ್ಲಿ ಬರ ವರದಿಯನ್ನು ಇಟ್ಟುಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತದೆ” ಎಂದರು.

“ಜಿಲ್ಲೆಯಲ್ಲಿ ಬರ ಆವರಿಸಿದ್ದು, ಮೆಣಸಿನಕಾಯಿ, ಭತ್ತ, ತೊಗರಿ, ಹತ್ತಿ ಸೇರಿದಂತೆ ಬೆಳೆ ಹಾನಿಯಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಬೆಳೆ ವೀಕ್ಷಣೆ ಮಾಡಿಲ್ಲ. ಸಮಿಕ್ಷೆ ನಡೆಸಿಲ್ಲ ಹಾಗೂ ಬರ ಕಾಮಗಾರಿಗೆ ಸಭೆ ಮಾಡಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಹಾಳಾದ ಸಿಸಿ ಕ್ಯಾಮೆರಾ; ವಾಹನ ಸಂಚಾರ ಅಸ್ತವ್ಯಸ್ತ

“ಬೇರೆ ಜಿಲ್ಲೆಯವರನ್ನು ಉಸ್ತುವಾರಿಯನ್ನಾಗಿ ಮಾಡಿದರೆ ಜಿಲ್ಲೆಯ ಬಗ್ಗೆ ಕಳಕಳಿ ಇರುವುದಿಲ್ಲವೆಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ. ಬರ ಅಧ್ಯಯನ ಮಾಡಲು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ. ಸರ್ಕಾರ ಕೂಡಲೇ ಬರ ಅಧ್ಯಯನ ಕೈಗೊಂಡು ಬೆಳೆಹಾನಿಯಾದ ರೈತರಿಗೆ ಪರಿಹಾರ ಕೊಡಬೇಕು. ಬರಗಾಲ ಬಂದಾಗ ಕೇಂದ್ರ ಸರ್ಕಾರವೂ ಸ್ಪಂದಿಸಬೇಕು. ಬರಪರಿಹಾರ ನೀಡುವುದು ಎರಡೂ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಶಿವಶಂಕರ ವಕೀಲ, ಯೂಸೂಫ್‌ಖಾನ್, ಲಕ್ಷೀಪತಿ ಗಾಣದ ನರಸಿಂಹ ನಾಯ್ಕ ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...