ರಾಯಚೂರು | ಚರ್ಚ್–ಆಂಜನೇಯ ದೇವಸ್ಥಾನ ವಿವಾದ: ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

Date:

ತಾಲ್ಲೂಕಿನ ಎಲೆಬಿಚ್ಚಾಲಿ ಕ್ಯಾಂಪ್‌ನ ಪುನರ್ವಸತಿ ಪ್ರದೇಶದಲ್ಲಿ ನಿರ್ಮಿಸಿದ ಚರ್ಚ್ ಹಾಗೂ ಆಂಜನೇಯ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

- Advertisement -

ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಒಪೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಿಲ್ಲೆಸೂಗುರು ಕ್ಯಾಂಪ್‌ನ ಪುನರ್ವಸತಿ ಪ್ರದೇಶದಲ್ಲಿ ನಿರ್ಮಿಸಿದ ಚರ್ಚ್ ಹಾಗೂ ಆಂಜನೇಯ ದೇವಸ್ಥಾನದ ಕುರಿತು ಕಳೆದ ಎರಡು ತಿಂಗಳಿಂದ ಎರಡು ಗುಂಪುಗಳ ನಡುವೆ ಅಸಮಾಧಾನ ಉಂಟಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಚರ್ಚ್ ಮತ್ತು ದೇವಸ್ಥಾನ ನಿರ್ಮಾಣದ ಕುರಿತು ಈ ಹಿಂದೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಮಾತುಕತೆಗೆ ಪ್ರಯತ್ನಿಸಲಾಗಿತ್ತು. ಆದರೆ ಇದೀಗ ಘಟನೆ ವಿಕೋಪಕ್ಕೆ ತಿರುಗಿ ಉದ್ವಿಗ್ನ ಪರಸ್ಥಿತಿ ನಿರ್ಮಾಣವಾಗಿದೆ.

ಈ ವಿಚಾರವಾಗಿ ನಿನ್ನೆ ದೇವಸ್ಥಾನ ಹಾಗೂ ಚರ್ಚ್ ವಿಚಾರವಾಗಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಿಚ್ಚಾಲಿಯಲ್ಲಿ ಚರ್ಚ್–ಆಂಜನೇಯ ಮೂರ್ತಿ ವಿವಾದ: ಆ.18ರವರೆಗೆ ನಿಷೇಧಾಜ್ಞೆ

ಸ್ಥಳಕ್ಕೆ ಇಡಪನೂರು ಪೊಲೀಸರು ಹಾಗೂ ಎಎಸ್‌ಪಿ ಬೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದ್ದಾರೆ. ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೋಲಿಸ್ ಬಂದೋಬಸ್ತು ಕಲ್ಪಿಸಿದ್ದು, ಬಿಚ್ಚಾಲಿ ಕ್ಯಾಂಪ್ ಸುತ್ತಮುತ್ತಲಿನ ಪ್ರದೇಶದಲ್ಲಿ 100 ಮೀಟರ್ ವ್ಯಾಪ್ತಿಯಲ್ಲಿ 7 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಕೋಲಾರ | ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಡಾ. ನಾಗರಾಜ್

ಆಗ್ನೇಯ ಪದವೀಧರರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ...

ಬಾಗೇಪಲ್ಲಿ | ನಟ ಪ್ರಕಾಶ್ ರಾಜ್ ಭಾಷಣಕ್ಕೆ ನಿರ್ಬಂಧ : ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕ್ರಮಕ್ಕೆ ಡಿ.ವೈ.ಎಫ್.ಐ ತೀವ್ರ ಆಕ್ರೋಶ

ಪಟ್ಟಣದ ತಾ.ಪಂ.ಪಕ್ಕೆ ಆಯೋಜಿಸಲಾಗಿದ್ದ ಡಿ.ವೈ.ಎಫ್.ಐ (ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್) ಸಮಾವೇಶದಲ್ಲಿ...