ರಾಯಚೂರು | ಕಾರ್ಮಿಕ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಐಟಿಯು ಆಗ್ರಹ

Date:

ಎಲ್ಲಾ ಕಾರ್ಮಿಕ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ಜ.23ರಿಂದ 25ವರೆಗೆ ಮೂರು ಹಂತದ ಹೋರಾಟಗಳನ್ನು ರೂಪಿಸಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷ ಎಸ್. ವರಲಕ್ಷ್ಮೀ ಹೇಳಿದರು.

- Advertisement -

ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕಾರ್ಮಿಕರನ್ನು ಒಕ್ಕಲೆಬ್ಬಿಸಲು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಹೊರಟಿದೆ. ಕಾರ್ಮಿಕರ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವ ಬದಲು ಅನುದಾನ ಕಡಿತಗೊಳಿಸುವ ಮೂಲಕ ಅಭದ್ರಗೊಳಿಸಲು ಮುಂದಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜ. 23ರಂದು ಕೇಂದ್ರ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ರಾಜ್ಯದ ಎಲ್ಲಾ ಸಂಸದರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ. ಅಂಗನವಾಡಿ, ಬಿಸಿಯೂಟ, ಉದ್ಯೋಗ ಖಾತ್ರಿ, ಆಶಾ ಕಾರ್ಯಕರ್ತೆಯರು, ಮಕ್ಕಳ ಹಕ್ಕುಗಳ ರಕ್ಷಣಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ಕಾರ್ಮಿಕರಿಂದ ಪ್ರತಿಭಟನೆ ನಡೆಸಲಾಗುತ್ತದೆ. ಒಂದು ಕೋಟಿ ಜನರು ಕಾರ್ಯನಿರ್ವಹಿಸುತ್ತಿದ್ದ ಕನಿಷ್ಟವೇತನ ನೀಡದೇ ವಂಚಿಸಲಾಗುತ್ತಿದೆ.

ನರೇಂದ್ರ ಮೊದಿ ಸರ್ಕಾರ ಬಂದ ಬಳಿಕ ಶೇ.90ರಷ್ಟು ನೀಡಲಾಗುತ್ತಿದ್ದ ಸ್ಕೀಂ ಯೋಜನೆಗಳ ಅನುದಾನವನ್ನು 60ಕ್ಕೆ ಇಳಿಸಲಾಗಿದೆ. 48 ಲಕ್ಷ ಅಂಗನವಾಡಿ, 20 ಲಕ್ಷ ಬಿಸಿಯೂಟ, 20 ಲಕ್ಷ ಆಶಾ ಕಾರ್ಯಕರ್ತೆಯರು ಸೇರಿ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕನಿಷ್ಟ ವೇತನ ನಿಡುತ್ತಿಲ್ಲ. 14ಲಕ್ಷ ಬಂಡವಾಳಗಾರರಿಗೆ ಶೇ.2ರಷ್ಟು ಕರ ವಿಧಿಸಿದರೆ ಕನಿಷ್ಟ ವೇತನಕ್ಕೆ ಬೇಕಿರುವ ಅನುದಾನ ಕ್ರೋಢಿಕರಿಸಬಹುದು. ಆದರೂ ಸರ್ಕಾರ ಆಸಕ್ತಿ ತೋರುತ್ತಿಲ್ಲ.

ಜ.24ರಂದು ಅಸಂಘಟಿತ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಎಲ್‌ಐಸಿ ಪ್ರತಿನಿಧಿಗಳು ಸೇರಿದಂತೆ ಕಾರ್ಮಿಕರು ಸಂಸದರ ಮನೆ ಮುಂದೆ ಧರಣ  ನಡೆಸಲಿದ್ದಾರೆ. 25ರಂದು ಹಮಾಲಿ, ಆಟೋ ಚಾಲಕರು, ಬೀದಿಬದಿ ವ್ಯಾಪಾರಿಗಳು ಸೇರಿ ಅಸಂಘಟಿತ ವಲಯ ಕಾರ್ಮಿಕರುಗಳು ಪ್ರತಿಭಟನೆ ನಡೆಸಲಿದ್ದಾರೆ. ಕಾರ್ಮಿಕ ಕಾಯ್ದೆಗಳನ್ನು ಮುಕ್ತಾಯಗೊಳಿಸಿ ನಾಲ್ಕು ಸಂಹಿತೆಗಳಾಗಿ ಜಾರಿಗೊಳಿಸಿ ಕಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವ ಕೆಲಸ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದರು.

31ಸಾವಿರ ಕನಿಷ್ಟ ವೇತನ ನೀಡುವಂತೆ ಒತ್ತಾಯಿಸಲಾಗಿದೆ. ಆದರೆ, ಸರ್ಕಾರ ಕಾರ್ಮಿಕರ ಮಾಂಸದ ವೆಚ್ಚದ ಅನುದಾನ ಕತ್ತರಿ ಹಾಕಿ ಕನಿಷ್ಟ ವೇತನವನ್ನು 21ಸಾವಿರ ರೂ. ನಿಗಧಿಗೊಳಿಸುವ ಕುತಂತ್ರ ನಡೆಸಲಾಗುತ್ತಿದೆ. ಒಂದೇ ದೇಶ ಎಂದು ಹೇಳುವ ಪ್ರಧಾನಿಗಳು ದೇಶದ ಎಲ್ಲಾ ಗುತ್ತಿಗೆ ನೌಕರರಿಗೆ ಒಂದೇ ಕನಿಷ್ಟ ವೇತನ ಜಾರಿಗೊಳಿಸಲಿ ಎಂದರು.

ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ಜ.12ರಂದು ಒಂದು ಕೊಟಿ ಸಹಿ ಸಂಗ್ರಹ ಚಳುವಳಿಯನ್ನು ನಡೆಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲಿ ನಡೆಯುವ ಸಹಿ ಸಂಗ್ರಹದಲ್ಲಿ ಅಸಂಘಟಿತ, ಹಾಗೂ ಗುತ್ತಿಗೆ ನೌಕರರು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಬದಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಲಕ್ಷ್ಮೀದೇವಮ್ಮ, ಜಿಲ್ಲಾಧ್ಯಕ್ಷೆ ಎಚ್. ಪದ್ಮಾ, ವಿಜಯಲಕ್ಷ್ಮೀ, ಮರಿಯಮ್ಮ, ಡಿ.ಎಸ್. ಶರಣಬಸವ ಉಪಸ್ಥಿತಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...