ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೇದೆ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪೂವಿತಾ.ಎಸ್. ಹಾಗೂ ಎಸ್‌ಪಿ ಅರುಣ್ಷಾಂಗಿರಿ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭವಾಗಿದೆ.
ಬೆಳಗಿನ ಅವಧಿಯಲ್ಲಿ ನಡೆದ ನಾನ್ ಎಚ್‌ಕೆ 3300 ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದು ಮಧ್ಯಾಹ್ನ ಹೈದ್ರಾಬಾದ ಕರ್ನಾಟಕ ಪ್ರದೇಶದ 596 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.
ರಾಯಚೂರು ನಗರದ 23, ಮಾನವಿ 7, ಸಿಂಧನೂರಿನ 15 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ನಡೆದಿವೆ. ಒಟ್ಟು 15,782 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. 708 ಅಭ್ಯರ್ಥಿಗಳು ಬೆಳಿಗ್ಗೆ ನಡೆದ ಪರೀಕ್ಷೆಗೆ ಗೈರಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ನಾರಾಯಣಪುರ ಡ್ಯಾಮ್ ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ: ಕಾಡ್ಲೂರಿನ ದೇವಸ್ಥಾನ ಜಲಾವೃತ
ಪರೀಕ್ಷಾರ್ಥಿಗಳ ತಪಾಸಣೆ, ಪ್ರಶ್ನೆ ಪತ್ರಿಕೆ ವಿತರಣೆ ಹಾಗೂ ಬಂದೋಬಸ್ತ್ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಡಿವೈಎಸ್ಪಿ ಶಾಂತವೀರ, ಉಮೇಶ ಕಾಂಬ್ಳೆ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಪರೀಕ್ಷಾ ಮೇಲುಸ್ತುವಾರಿ ನಡೆಸಿದರು.




