ರಾಯಚೂರು | ವೋಟ್ ಬಚಾವ್, ದೇಶ್ ಬಚಾವ್’ ಘೋಷದೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Date:

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ, ‘ವೋಟ್ ಬಚಾವ್, ದೇಶ್ ಬಚಾವ್’ ಘೋಷವಾಕ್ಯದಡಿ ನಗರದ ಡಾ. ಬಿ.ಆರ್. ಅಂಬೇಡ್ಕ‌ರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ಈ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ಅವರ ಅಣಕು ಪ್ರದರ್ಶನ ನಡೆಸಿ, ಘೋಷಣೆಗಳನ್ನು ಕೂಗುವ ಮೂಲಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆ‌ರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಹಿಂದಿನ ಮತದಾರರ ಪಟ್ಟಿಯ ಆಧಾರದಲ್ಲಿಯೇ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್.ಎಸ್.ಬೋಸರಾಜು ಮಾತನಾಡಿ, ಎಸ್‌ಐಆ‌ರ್ ಪ್ರಕ್ರಿಯೆಯ ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಅಧಿಕಾರ ಪಡೆಯುವ ಉದ್ದೇಶದಿಂದ ಬಿಜೆಪಿ ಈ ಪ್ರಕ್ರಿಯೆಯನ್ನು ಅಸ್ತವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ದೇಶಾದ್ಯಂತ ಸುಮಾರು 13 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಆರಂಭದಿಂದಲೂ ಮತಗಳ್ಳತನದ ವಿರುದ್ಧ ದೇಶಾದ್ಯಂತ ಧ್ವನಿ ಎತ್ತಿ ಹೋರಾಟ ನಡೆಸುತ್ತಿದ್ದರೂ ಚುನಾವಣಾ ಆಯೋಗ ಸ್ಪಂದಿಸುತ್ತಿಲ್ಲ. ಬದಲಾಗಿ ಬಿಜೆಪಿಯ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದರು.

ಈಗ ಮತದಾರರು ಜಾಗೃತರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಹಾಗೂ ವಿರೋಧ ಪಕ್ಷಗಳ ಹೋರಾಟಕ್ಕೆ ಕೈಜೋಡಿಸುತ್ತಿದ್ದಾರೆ. ಇದರಿಂದ ಕೇಂದ್ರ ಸರ್ಕಾರಕ್ಕೆ ನಡುಕ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಗಟ್ಟಿಯಾದ ಹೋರಾಟ ನಡೆಯಲಿದೆ. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಮತಗಳ್ಳತನದ ಕುರಿತು ಬಹಿರಂಗವಾಗಿ ಧ್ವನಿ ಎತ್ತುತ್ತಿದ್ದಾರೆ ಎಂದರು.

ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಯಬೇಕಾದರೆ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಎಸ್‌ಐಆ‌ರ್ ಪ್ರಕ್ರಿಯೆ ರದ್ದುಗೊಳಿಸಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ ಸರ್ವೋದಯ ಪಕ್ಷದ ರಾಜ್ಯ ಮುಖಂಡ ಚಾಮರಸ ಮಾಲಿ ಪಾಟೀಲ, ಕಾಂಗ್ರೆಸ್‌ ಮಾಧ್ಯಮ ವಕ್ತಾರ ಡಾ. ರಝಾಕ್ ಉಸ್ತಾದ್ ಮತ್ತಿತರರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆಗೆ ಆಗ್ರಹಿಸಿ ನ.6ರಂದು ಧರಣಿ: ಹನುಮಂತಪ್ಪ ಕಾಕರಗಲ್

ಪ್ರತಿಭಟನೆಯಲ್ಲಿ ಗ್ಯಾರಂಟಿ ಸಮಿತಿಯ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಮುಖಂಡರಾದ ಜಯಣ್ಣ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ರಾಮಣ್ಣ ಇರಬಗೇರಾ, ಅಸ್ಲಂ ಪಾಷಾ, ರುದ್ರಪ್ಪ ಅಂಗಡಿ, ಜಿ. ಶಿವಮೂರ್ತಿ, ರಾಜಶೇಖರ ನಾಯಕ, ಯೂಸೂಫ್ ಖಾನ್, ರಾಣಿ ರಿಚರ್ಡ್, ಗಿರಿಯಪ್ಪ ನೆಲಹಾಳ, ಕೆ. ಇ. ಕುಮಾರ, ವೆಂಕಟೇಶ, ಮಾರೆಪ್ಪ ಜಿಂದಪ್ಪ ವಿಶ್ವನಾಥ ಪಟ್ಟಿ, ನಿರ್ಮಲಾ ಬೆಣ್ಣೆ ಶಶಿಕಲಾ ಭಿಮಾರಾಯ್, ಪ್ರತಿಭಾ ರೆಡ್ಡಿ ಹಾಗೂ ಯುವ ಕಾಂಗ್ರೆಸ್‌ ಮುಖಂಡರಾದ ಮುನಿಸ್ವಾಮಿ, ಫೈಸಲ್ ಖಾನ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 2,350ಕ್ಕೂ ಹೆಚ್ಚು ಅನಾಥರು, ಅಂಗವಿಕಲರು, ಪೌರ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ

ವೃತ್ತಿ ಕೇವಲ ಜೀವನೋಪಾಯದ ಮಾರ್ಗವಾಗದೆ, ಸಮಾಜ ಸೇವೆಯ ಸಾಧನವಾಗುವ ಮೂಲಕ ಮಾನವೀಯತೆಯ...

ಉಡುಪಿ | ಹಾಲಿನ ಬೆಲೆ ಏರಿಕೆ: ಮಹಿಳೆಯರ ಅಡುಗೆ ಮನೆಯ ಲೆಕ್ಕಾಚಾರಕ್ಕೆ ಸರ್ಕಾರದ ಹೊಡೆತ !

ಬೆಲೆ ಏರಿಕೆಯ ಬಿಸಿ ಈಗ ಜನಸಾಮಾನ್ಯರ ಅಡುಗೆ ಮನೆಯನ್ನೂ ತಟ್ಟಿದೆ. ಅಡುಗೆ...

ಯಾದಗಿರಿ | ನ.30ರವರೆಗೆ ಕಾಲುವೆಗೆ ನಿರಂತರ ನೀರು ಹರಿಸಿ, ಎಕರೆಗೆ ₹50 ಸಾವಿರ ಪರಿಹಾರ ನೀಡಿ: ರೈತರ ಆಗ್ರಹ

ತೀವ್ರ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸಿ, ಎಕರೆಗೆ...

ಉಡುಪಿ | ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಹೆದರುವುದಿಲ್ಲ, ಬಿಜೆಪಿಗೆ ತಾಕತ್ತಿದ್ದರೆ ಎದುರಿಸಿ: ಸುರೇಶ್ ಶೆಟ್ಟಿ ಬನ್ನಂಜೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುವ ಬೆದರಿಕೆಗಳಿಗೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ....