ರಾಯಚೂರು | ಸರ್ವಜನಾಂಗದ ಅಭಿವೃದ್ಧಿ ಬಯಸುವ ಶ್ರೇಷ್ಠ ಗ್ರಂಥ ಸಂವಿಧಾನ: ಎಸ್‌ಟಿ ಕಲ್ಯಾಣಾಧಿಕಾರಿ ಮಂಜುಳಾ ಅಸುಂಡಿ 

Date:

Advertisements

ಭಾರತದ ಸಂವಿಧಾನ ಸರ್ವಜನಾಂಗದ ಅಭಿವೃದ್ಧಿಯನ್ನು ಬಯಸುವ ಶ್ರೇಷ್ಠ ಗ್ರಂಥ. ಇಂತಹ ಮಹಾನ್ ಗ್ರಂಥವನ್ನು ನಾವೆಲ್ಲ ಅಧ್ಯಯನ ಮಾಡಿ, ಅದರ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಪರಿಶಿಷ್ಟ ಪಂಗಡದ ಕಲ್ಯಾಣ ಅಧಿಕಾರಿ ಮಂಜುಳಾ ಅಸುಂಡಿ ಹೇಳಿದರು.

ತಾಲೂಕಿನ ಮಸರಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಮತಾ ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆಯಿಂದ ಆಯೋಜಿಸಿದ್ದ ʼಸಂವಿಧಾನದ ಕಡೆ ವಿದ್ಯಾರ್ಥಿಗಳ ನಡೆʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ನನ್ನಂತಹ ಸಾಮಾನ್ಯ ಮಹಿಳೆ ಅಧಿಕಾರಿಯಾಗಿದ್ದೇನೆ ಎಂದರೆ ಇದಕ್ಕೆ ಕಾರಣ ಸಂವಿಧಾನ. ಈ ಸಂವಿಧಾನವು ಶಾಸನಗಳನ್ನು ರೂಪಿಸುವ, ಜಾರಿಗೆ ತರುವ ಕಾರ್ಯವನ್ನು ಮಾಡುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಸಂವಿಧಾನದ ಕುರಿತಾಗಿ ಜಾಗೃತಿ ಹೊಂದುವುದು ತುಂಬಾ ಅಗತ್ಯವಿದೆ” ಎಂದು ಇಂತಹ ಕಾರ್ಯಕ್ಕೆ ಮುಂದಾಗಿರುವ ಸಮತಾ ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆಯನ್ನು ಅಭಿನಂದಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಎನ್‌ಐಎ ದಾಳಿ; ನಕಲಿ ನೋಟು ತಯಾರಿಸುತ್ತಿದ್ದ ವ್ಯಕ್ತಿ ಬಂಧನ

‌ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಸತಿ ಶಾಲೆಯ ಪ್ರಾಂಶುಪಾಲ ಶರಣಬಸಯ್ಯ ಹಿರೇಮಠ, ಜಿಲ್ಲಾ ವಕ್ಫ್ ಮಂಡಳಿ ಸದಸ್ಯ ಅಲಿಪಾಷಾ, ರೈತ ಮುಖಂಡ ಸುನಂದಕುಮಾರ ಬಳೆ ಸೇರಿದಂತೆ ಇತರರು ಇದ್ದರು.

ವರದಿ : ಬಸವರಾಜ್ ಬ್ಯಾಗವಾಟ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X