ರಾಯಚೂರು | ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

Date:

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ವ್ಯವಸ್ಥೆ ಮಾಡಲಾಗಿದೆ.

- Advertisement -

ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ರಾಜ್ಯದ ಜನತೆಗೆ ಈ ಮಹತ್ವದ ಕಾರ್ಯಕ್ರಮವನ್ನು ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಂಸ್ಥೆಯ ಸಹಯೋಗದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ರಾಜ್ಯಾದ್ಯಂತ ಇರುವ ಪ್ರಮುಖ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಡಿಸ್‍ಪ್ಲೇ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಪೂರ್ಣ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ.

ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯ ಜನರು ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಹತ್ತಿರದ ಬಸ್ ನಿಲ್ದಾಣಗಳಲ್ಲೇ ನಿಂತು ಮುಖ್ಯಮಂತ್ರಿಗಳು ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಉಚಿತವಾಗಿ ಕಣ್ತುಂಬಿಕೊಳ್ಳಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಳೆ ಜಿಲ್ಲೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಲೋಕ ಭವನದಲ್ಲಿ ನಡೆಯಲಿರುವ ಈ ಅದ್ಧೂರಿ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ಪೂರ್ಣಗೊಂಡಿದ್ದು, ಇಡೀ ರಾಜ್ಯದ ಕಣ್ಣು ಇಂದು ಸಂಜೆ ಬಸ್ ನಿಲ್ದಾಣಗಳ ಡಿಜಿಟಲ್ ಪರದೆಗಳತ್ತ ನೆಡಲಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...