ರಾಯಚೂರು | ಹೆರಿಗೆ ವೇಳೆ ಅವಳಿ ಗಂಡು ಮಕ್ಕಳ ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ

Date:

ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಅವಳಿ ಗಂಡು ಮಕ್ಕಳು ಮೃತಪಟ್ಟಿರುವ ಘಟನೆ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಆಸ್ಪತ್ರೆಯಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

- Advertisement -

ಮಾನ್ವಿ ತಾಲ್ಲೂಕಿನ ಕಾವೇರಿ ಚನ್ನಬಸವ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾನ್ವಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದಾಗಿ ಅಲ್ಲಿನ ವೈದ್ಯರು ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ರಿಮ್ಸ್‌ಗೆ ದಾಖಲಾದ ಬಳಿಕ ಕಾವೇರಿ ತೀವ್ರ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದರು. ನೋವು ತಾಳಲಾರದೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ಮಾಡುವಂತೆ ವೈದ್ಯರಲ್ಲಿ ಕುಟುಂಬಸ್ಥರು ಮನವಿ ಮಾಡಿದ್ದರು. ಆದರೆ ವೈದ್ಯರು ಹಾಗೂ ಸಿಬ್ಬಂದಿ ‘ಸಹಜ ಹೆರಿಗೆಯಾಗುತ್ತದೆ’ ಎಂದು ಹೇಳಿ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪಾಲಕರು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | 761 ಅಂಗನವಾಡಿಗಳಿಗಿಲ್ಲ ಸ್ವಂತ ಸೂರು: ಸೋರುವ ಕೊಠಡಿಗಳಲ್ಲೇ ಮಕ್ಕಳ ಊಟ, ಪಾಠ

ರಿಮ್ಸ್ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ರಾಧಾ ಸಂಗಾವಿ ಪ್ರತಿಕ್ರಿಯಿಸಿ, ನಮ್ಮ ಸಿಬ್ಬಂದಿ ಕಡೆಯಿಂದ ಯಾವುದೇ ಲೋಪವಾಗಿಲ್ಲ. ಮಾನ್ವಿ ವೈದ್ಯರಿಂದ ಶಿಫಾರಸಾಗಿ ಬರುವಾಗಲೇ ತಾಯಿಯ ರಕ್ತದೊತ್ತಡ ಹೆಚ್ಚಾಗಿತ್ತು ಹಾಗೂ ಗರ್ಭದಲ್ಲೇ ಮಕ್ಕಳು ಮೃತಪಟ್ಟಿದ್ದವು. ತಾಯಿಗೆ ಫಿಟ್ಸ್ ಬಾರದಂತೆ ತುರ್ತು ಚಿಕಿತ್ಸೆ ನೀಡಿ, ಗರ್ಭದಲ್ಲೇ ಮೃತಪಟ್ಟಿದ್ದ ಮಕ್ಕಳನ್ನು ಹೊರತೆಗೆಯಲಾಗಿದೆ. ಸದ್ಯ ತಾಯಿಯ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...