ಸಿಂಧನೂರು ತಾಲ್ಲೂಕು ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಹಾಗೂ ಜಿಲ್ಲೆಯಲ್ಲಿ ನಿರಂತರ ಕೊಲೆ ಪ್ರಕರಣಗಳು ನಡೆದರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾದ ದಲಿತರ ರಕ್ಷಣೆ ನೀಡದ ಕಾಂಗ್ರೆಸ್ ಸರಕಾರದ ಸಿಎಂ,ಹೆಚ್.ಎಂ,ಡಿಎಂ ವಿರುದ್ಧ ಪಿಂಡ ಪ್ರದಾನ ಮಾಡಲಾಗುವುದೆಂದು ದಲಿತ ಮುಖಂಡ ಎಸ್ ಮಾರೆಪ್ಪ ವಕೀಲರು ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ. ನ.8 ರಂದು ತಿಡಿಗೋಳ ಗ್ರಾಮದಲ್ಲಿ ದಲಿತರ ರಕ್ಷಣೆ ನೀಡದ ಕಾಂಗ್ರೆಸ್ ಸರಕಾರ ವಿರುದ್ಧ ಪಿಂಡ ಪ್ರದಾನ ಮಾಡಲಾಗುವುದು ಎಂದರು. ದಿ.30 ರಂದು ಸಿಂಧನೂರು ಪಟ್ಟಣಕ್ಕೆ ಆಗಮಿಸುವ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ಕಪ್ಪು ಬಟ್ಟೆ ಪ್ರದರ್ಶನದ ಮೂಲಕ ಮನವಿ ಸಲ್ಲಿಸಲಾಗುವುದು ಎಂದರು.
ಸಂತ್ರಸ್ತ ಗ್ರಾಮದ ಮುಖಂಡ ತಾಯಪ್ಪ ಮಾತನಾಡಿ, ದಿ.18 ಆಂಜನೇಯ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಡ್ರಾಮ್ಸ್ ಭಾರಿಸುವ ವಿಚಾರದಲ್ಲಿ ಸವರ್ಣೀಯರು ಹಾಗೂ ದಲಿತರ ಮಧ್ಯೆ ಗಲಾಟೆ ನಡೆದು, ದಲಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದರು.
2021ಜಾತ್ರಾ ಮಹೋತ್ಸವ ಇದೆ ರೀತಿ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿತ್ತು. ಪ್ರತಿ ವರ್ಷ ಮಾದರಿಯಲ್ಲಿ ಈ ವರ್ಷ ಕೂಡ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸವರ್ಣಿಯರು ದಲಿತರ ಮೇಲೆ ತೀವ್ರ ಹಲ್ಲೆ ನಡೆಸಿ, ಹುಸೇನಪ್ಪ ಎಂಬ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿ, ಅರೆ ನಗ್ನಗೊಳಿಸಿದ್ದಾರೆ ಎಂದು ಆರೋಪಿಸಿದರು. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದ ದಲಿತ ಯುವಕರ ಮೇಲೆ ದಾಖಲಿಸಿದ 71 ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶ ನಿರಾಕರಿಸಲಾಗುತ್ತಿದೆ ಎಂಬ ಆರೋಪ ಮಾಡಿದರು. 17 ಕುಟುಂಬಗಳ ನಿವೇಶನ ಅತಿಕ್ರಮಣ, ಸರ್ಕಾರಿ ಭೂಮಿ ಒತ್ತುವರಿ, ಆಶ್ರಯ ನಿವೇಶನಗಳ ಕೊರತೆ ಹಾಗೂ ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಾವದ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು.
ದಲಿತ ಯುವಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು, ಸಂತ್ರಸ್ತರಿಗೆ ಆಹಾರ ಧಾನ್ಯ ಮತ್ತು ಪೊಲೀಸ್ ರಕ್ಷಣೆ ಒದಗಿಸುವುದು, ಅಸ್ಪೃಶ್ಯತೆ ನಿವಾರಣೆ, ಸರ್ಕಾರಿ ಭೂಮಿ ಅತಿಕ್ರಮಣದ ತನಿಖೆ ಹಾಗೂ ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ದಿಟ್ಟರು. ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬೆಳೆ ನಷ್ಟ ಪರಿಹಾರ, ನರೇಗಾದಡಿ 200 ದಿನ ಕೆಲಸಕ್ಕೆ ಆಗ್ರಹಿಸಿ ರೈತರು, ಕೃಷಿ ಕೂಲಿಕಾರರ ಪ್ರತಿಭಟನೆ
ಈ ಸಂದರ್ಭದಲ್ಲಿ ಎಸ್. ಮಾರೆಪ್ಪ, ರವೀಂದ್ರನಾಥ್ ಪಟ್ಟಿ, ಎಂ.ಆರ್. ಛೇರಿ, ಹೇಮರಾಜ್ ಅಸ್ಕಿಹಾಲ ಇನ್ನಿತರರು ಇದ್ದರು.





