ರಾಯಚೂರು | ನಿವೇಶನ ಮತ್ತು ಮನೆ ಹಂಚಿಕೆಯಲ್ಲಿ ವಿಳಂಬ; ಜ.22ರಿಂದ ಆಹೋರಾತ್ರಿ ಧರಣಿ

Date:

ವಿಶೇಷ ವರ್ಗಗಳ (ಸ್ಪೇಷಲ್ ಕೆಟಗರಿ) ಅಡಿಯಲ್ಲಿ ನಿವೇಶನ ಮತ್ತು ಮನೆಗಳನ್ನು ಹಂಚಿಕೆ ಮಾಡುವಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಜನವರಿ 22ರಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಯಚೂರು ಜಿಲ್ಲಾ ಸಂಚಾಲಕ ನರಸಿಂಹಲು ಹೇಳಿದರು.

ರಾಯಚೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ನಗರ ಸ್ಥಳೀಯ ಸಂಸ್ಥೆಗಳಿಂದ ನಾಲ್ಕೈದು ಬಾರಿ ಸಮೀಕ್ಷೆ ನಡೆಸಿದ್ದರೂ ಜಿಲ್ಲಾಧಿಕಾರಿಯವರು ಅನುಮೋದನೆ ನೀಡಿ ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ಶಿಫಾರಸು ಮಾಡುತ್ತಿಲ್ಲ. ಅನೇಕ ಬಾರಿ ಪ್ರತಿಭಟನೆ, ಮನವಿಗಳನ್ನು ನೀಡಿದರೂ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಸರ್ಕಾರದ ಇಂತಹ ನಿರ್ಲಕ್ಷ್ಯ ಖಂಡಿಸಿ ನಡೆಯಲಿರುವ ಅಹೋರಾತ್ರಿ ಹೋರಾಟದಲ್ಲಿ ಜಿಲ್ಲೆಯ ಫಲಾನುಭವಿಗಳು ಭಾಗವಹಿಸಲಿದ್ದಾರೆ” ಎಂದರು.

ದಲಿತ ಸಮರ ಸೇನೆ ಜಿಲ್ಲಾಧ್ಯಕ್ಷ ನೀಲಕಂಠ ಮಾತನಾಡಿ, “ನಿವೇಶನ ಮತ್ತು ವಸತಿ ನೀಡುವಂತೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ನಾಲ್ಕು ಬಾರಿ ಸಮೀಕ್ಷೆ ನಡೆಸಲಾಗಿದೆ. 900 ಮಂದಿ ಫಲಾನುಭವಿಗಳನ್ನು ಗುರುತಿಸಲಾಗಿದೆ. ಸಿಂಧನೂರು 237, ಲಿಂಗಸೂಗೂರು 188, ಮಾನ್ವಿ 163, ಸಿರವಾರ 218, ಕವಿತಾಳ 188 ಹಾಗೂ ಹಟ್ಟಿಯಲ್ಲಿ 74 ಮಂದಿ ಫಲಾನುಭವಿಗಳನ್ನು ಗುರುತಿಸಲಾಗಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮೈಸೂರು | ಸ್ವಚ್ಛತೆಗೆ ಆದ್ಯತೆ ನೀಡಿ: ಎನ್‌ಜಿಟಿ ಅಧ್ಯಕ್ಷ

“ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳನ್ನು ಕೇಳಿದರೆ ಉಡಾಫೆಯಾಗಿ ಮಾತನಾಡಿ, ಮಹಿಳೆಯರನ್ನು ಹೊರ ಕಳುಹಿಸುವಂತೆ ಹೇಳುತ್ತಿದ್ದಾರೆ. ಜಿಲ್ಲಾಧಿಕಾರಿಗೆ ಮನವಿ ನೀಡಿದರೂ ಕ್ರಮವಹಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನತಾ ದರ್ಶನದಲ್ಲಿಯೂ ದೂರು ನೀಡಲಾಗಿದ್ದರಿಂದ ಸಚಿವರು ಸೂಚನೆ ನೀಡಿದ್ದಾರೆ. ಆದರೂ ಮನೆಗಳನ್ನು ನೀಡುತ್ತಿಲ್ಲ. ವಸತಿ ಸಚಿವರೂ ಕೂಡ ಪತ್ರ ಬರೆದಿದ್ದಾರೆ. ಇಷ್ಟಾದರೂ ಜಿಲ್ಲಾಡಳಿತ ಸ್ಪಂದಿಸದೇ ಇರುವುದನ್ನು ಖಂಡಿಸಿ ಆಹೋರಾತ್ರಿ ಧರಣಿ ನಡೆಸಲು ನಿರ್ಧರಿಸಲಾಗಿದೆ. ಈ ವೇಳೆ ಮೂರು ಸಾವಿರ ಮಂದಿ ಮಹಿಳೆಯರು ಧರಣಿಯಲ್ಲಿ ಭಾಗವಹಿಸಲಿದ್ದಾರೆ” ಎಂದರು.

ಈ ಸಂದರ್ಭದಲ್ಲಿ ಕರಿಯಪ್ಪ, ರಂಗಮ್ಮ, ಅನಿಲ್, ಶಂಕರ, ದುರ್ಗಮ್ಮ, ಮಹಿಬೂಬಿ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...