ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

Date:

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು ‘ವಿದ್ಯುತ್ ಕೊಡಿ, ಇಲ್ಲವೇ ವಿಷ ಕೊಡಿ’ ಎಂದು ಶಾಸಕ ಡಾ. ಶಿವರಾಜ ಪಾಟೀಲ್ ನೇತೃತ್ವದಲ್ಲಿ ನೂರಾರು ರೈತರು ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಗ್ರಾಮೀಣ ಭಾಗದಲ್ಲಿ ಕನಿಷ್ಟ ಐದು ತಾಸು ವಿದ್ಯುತ್ ನೀಡದೇ ಇರುವದರಿಂದ ಹತ್ತಿ, ಸೇಂಗಾ ಸೇರಿದಂತೆ ಅನೇಕ ಬೆಳೆಗಳು ಒಣಗಿ ಹೋಗುತ್ತಿವೆ. ಅನೇಕ ಬಾರಿ ಮನವಿ ಮಾಡಿದರೂ ವಿದ್ಯುತ್ ನೀಡುತ್ತಿಲ್ಲ ಎಂದು ರೈತರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ರಾಜ್ಯಕ್ಕೆ ವಿದ್ಯುತ್ ನೀಡುವ ಘಟಕಗಳಿಗೆ ಭೂಮಿ ನೀಡಿ ಶೆಖೆಯನ್ನು ಅನುಭವಿಸುತ್ತಿರುವ ಇಲ್ಲಿಯ ಜನರಿಗೆ ವಿದ್ಯುತ್ ಕೊಡುತ್ತಿಲ್ಲ. ಬೆಳೆ ಕೈಗೆ ಬರುವ ಮುನ್ನವೇ ವಿದ್ಯುತ್ ಇಲ್ಲದೇ ಒಣಗಿ ಹೋಗುತ್ತಿವೆ. ರಾಜ್ಯದಲ್ಲಿ ಬರ ಆವರಿಸಿದ್ದು ಕೃಷಿ ಪಂಪಸೆಟ್ ನಂಬಿರುವ ರೈತರಿಗೆ ಜೆಸ್ಕಾಂ ವಿದ್ಯುತ್ ಕಡಿತಗೊಳಿಸಿ ಮತ್ತೊಂದು ಬರ ಸೃಷ್ಟಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಸ್ಕಾಂ ಅಧಿಕಾರಿಗಳಿಗೆ ರಾಯಚೂರು ಜಿಲ್ಲೆ ಕಾಣುತ್ತಿಲ್ಲ 12 ತಾಸು ವಿದ್ಯುತ್ ನೀಡಬೇಕು. ಇಲ್ಲ ವಿಷ ಕೊಡಿ ಇಲ್ಲಿಯೇ ಸಾಯುತ್ತೇವೆ. ಜೆಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಭರವಸೆ ನೀಡುವವರೆಗೆ ಹೋರಾಟ ನಿಲ್ಲುವದಿಲ್ಲ, ಇಲ್ಲಿಯೇ ಮಲಗುತ್ತೇವೆ ಎಂದು ಎಚ್ಚರಿಸಿದರು. ರಾಯಚೂರು ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು ಒಣಗಿ ಬೆಳೆಯನ್ನು ಜೆಸ್ಕಾಂ ಅಧಿಕಾರಿಗಳ ಮುಂದೆ ಪ್ರದರ್ಶಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಪ್ರತಿಬಟನೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಜಲ್ದಾರ, ಪಾಲಿಕೆ ಮಾಜಿ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಮಹೇಂದ್ರರೆಡ್ಡಿ, ಯು.ನರಸರೆಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗಿಯಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....