ರಾಯಚೂರು | ಹಟ್ಟಿ ಚಿನ್ನದ ಗಣಿ–ಲಿಂಗಸುಗೂರು ನಡುವೆ ಸಮರ್ಪಕ ಬಸ್ ಸೇವೆಗೆ ಒತ್ತಾಯ

Date:

ಹಟ್ಟಿ ಪಟ್ಟಣದಿಂದ ಲಿಂಗಸೂರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಎಸ್ಎಫ್ಐ, ಸಿಐಟಿಯು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಟ್ಟಿ ಬಸ್ ನಿಲ್ದಾಣದಲ್ಲಿ ಸುಮಾರು 3 ಗಂಟೆಗಳ ಕಾಲ ಬಸ್ ಗಳನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಲಾಯಿತು

- Advertisement -

ಗುರುವಾರದಂದು ಪ್ರತಿಭಟನೆ ನಡೆಸಿದ ಜಂಟಿ ಸಂಘಟನೆಗಳ ಮುಖಂಡರು ಡಿಪೋ ಮ್ಯಾನೇಜರ್ ಸ್ಥಳಕ್ಕೆ ಆಗಮಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಾಗ ಡಿಪೋ ಮ್ಯಾನೇಜರ್ ಪಿ.ಲಕ್ಷ್ಮಣ್ ಅವರು ಸ್ಥಳಕ್ಕೆ ಆಗಮಿಸಿ, ಸಮಸ್ಯೆಯನ್ನು ಪರಿಹಾರ ಮಾಡುವುದಾಗಿ ಲಿಖಿತ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆಯಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ತಾಲೂಕಿನ ಲಿಂಗಸ್ಗೂರು ಡಿಪೋ ದಲ್ಲಿ ಬಸ್ಸುಗಳ ಕೊರತೆ ಇದೆ. ಗುಜರಿಗೆ ಹಾಕುವ ಎಲ್ಲಾ ಬಸ್ಸುಗಳನ್ನು ತಾಲೂಕಿನಲ್ಲಿ ಓಡಿಸಲಾಗುತ್ತದೆ. ಇದರಿಂದ ಅವು ಮಧ್ಯದಲ್ಲಿ ಕೆಟ್ಟ ನಿಲ್ಲುತ್ತಿವೆ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಸರಿಯಾದ ಸಮಯಕ್ಕೆ ಶಾಲಾ ಕಾಲೇಜು ಹಾಗೂ ಇತರೇ ಕೆಲಸಗಳ ಸ್ಥಳಕ್ಕೆ ತಲುಪದೆ ನಿತ್ಯ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗಂತೂ ಅವರ ಅಭ್ಯಾಸದ ಮೇಲೆ ಭಾರೀ ಪೆಟ್ಟು ಬಿದ್ದಿದೆ‌.

ತಾಲೂಕಿನ ಬಸ್ ಡಿಪೋಗೆ ಹೊಸ ಬಸ್ಸುಗಳನ್ನು ಖರೀದಿ ಮಾಡುವ ತುರ್ತು ಇದೆ. ಆದರೆ ಶಾಸಕ ಮಾನಪ್ಪ ವಜ್ಜಲ್ ತಾಲೂಕಿನಲ್ಲಿ ಕಾಣೆಯಾಗಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಯುವಜನರ ಸಮಸ್ಯೆಗಳನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ‌. ಇಂತಹ ಅಯೋಗ್ಯ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯಾಗಿರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆಗೆ ಆಗ್ರಹ: ಎಸ್‌ಎಫ್‌ಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಈ ಸಂದರ್ಭದಲ್ಲಿ ಕಾರ್ಮಿಕ ಸಂಘದ ಮುಖಂಡರಾದ ಕೆಪಿಆರ್ ಎಸ್ ಮುಖಂಡರಾದ ಪೆಂಚಲಯ್ಯ, ವನಜಾಕ್ಷಿ, ಹಾಜಿಬಾಬು, ಅಲ್ಲಾಭಕ್ಷ, ರಜಿಯಾ, ಸಾಹಿರಾ ಬಾನು, ದುರುಗಮ್ಮ, ಫಕೃದ್ದೀನ್, ದಾವೂದ್, ಡಿವೈಎಫ್ಐ ಮುಖಂಡ ಕಾಶಿಪತಿ ತವಗ ಸೇರಿದಂತೆ ನೂರಾರು ವಿದ್ಯಾರ್ಥಿಗಳು, ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...